ಸೋಮವಾರ, ಸೆಪ್ಟೆಂಬರ್ 27, 2021
22 °C
ಜಿಲ್ಲೆಯ ವಿವಿಧೆಡೆ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ

ಮೈಸೂರು | ಕೇಂದ್ರ–ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಶುಕ್ರವಾರ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಿತು.

ಮೈಸೂರಿನ ಮಿನಿವಿಧಾನಸೌಧದ ಮುಂಭಾಗ ಜಮಾಯಿಸಿದ ಆಶಾ ಕಾರ್ಯಕರ್ತೆಯರು ಕೇಂದ್ರ–ರಾಜ್ಯ ಸರ್ಕಾರದ ಧೋರಣೆ ವಿರುದ್ಧ ಕಿಡಿಕಾರಿದರು. ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.

ಆಶಾಗಳೇ ಒಂದಾಗಿ, ಹೋರಾಟಕ್ಕೆ ಮುಂದಾಗಿ. ಆಶಾಗಳ ಕಷ್ಟ ಕಾರ್ಪಣ್ಯ ಕೇಳದ ಸರ್ಕಾರ, ಕಣ್ಣೋರೆಸುವ ತಂತ್ರ ಅನುಸರಿಸುವ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಎಂಬ ಘೋಷಣೆಗಳನ್ನು ಮೊಳಗಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಎಐಟಿಯುಸಿ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

‘ರಾಜ್ಯದಾದ್ಯಂತ 15 ದಿನಗಳಿಂದ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ. ಆದರೆ ಸರ್ಕಾರದ ಯಾವ ಪ್ರತಿನಿಧಿಯೂ ನಮ್ಮ ಸಮಸ್ಯೆ ಆಲಿಸಲು ಮುಂದಾಗುತ್ತಿಲ್ಲ. ಇದು ಖಂಡನೀಯ’ ಎಂದು ಪ್ರತಿಭಟನನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಆಶಾ ಕಾರ್ಯಕರ್ತೆಯರು ಕೋವಿಡ್ ನಿಯಂತ್ರಣ ಹಾಗೂ ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಸಾಕಷ್ಟು ಶ್ರಮಿಸುತ್ತಿದ್ದಾರೆ. ಇವರ ಅಮೂಲ್ಯ ಸೇವೆಯನ್ನು ಸರ್ಕಾರ ಕಡೆಗಣಿಸಿದೆ. ಈ ಸಂದರ್ಭದಲ್ಲಿ ಸುರಕ್ಷಾ ಪರಿಕರಗಳಿಲ್ಲದೇ ಮನೆ ಮನೆಗೆ ತೆರಳಿ ಸರ್ವೆ ಮಾಡಬೇಕಿದೆ. ಸರ್ಕಾರವು ವೇತನ ಭತ್ಯೆಯನ್ನು ಸಮಯಕ್ಕೆ ಸರಿಯಾಗಿ ನೀಡದೆ ಶೋಷಣೆ ಮಾಡುತ್ತಿದೆ. ಆದರಿಂದ್ದ ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುತ್ತೇವೆ’ ಎಂದರು.

‘ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಪ್ರತಿ ತಿಂಗಳು ₹ 12 ಸಾವಿರ ಗೌರವಧನ ನೀಡಬೇಕು. ಅಗತ್ಯವಿರುವ ಕೋವಿಡ್ ಸುರಕ್ಷಾ ಸಾಮಗ್ರಿಗಳನ್ನು ವಿತರಿಸುವ ಜೊತೆಗೆ, ಸೋಂಕಿನಿಂದ ಮೃತಪಟ್ಟ ಕಾರ್ಯಕರ್ತೆಯರಿಗೆ ಸೂಕ್ತ ಪರಿಹಾರ ಮತ್ತು ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು’ ಎಂದು ಅಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು