ಶನಿವಾರ, ಆಗಸ್ಟ್ 20, 2022
21 °C

ಭತ್ತ ಕಟಾವು ಯಂತ್ರ: ಬಾಡಿಗೆ ದರ ನಿಗದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಭತ್ತದ ಕಟಾವು ಆರಂಭವಾಗಿದೆ. ಕೋವಿಡ್–19 ಸಂದರ್ಭದಲ್ಲಿ ರೈತರಿಗೆ ಇದು ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಆದ್ದರಿಂದ ಭತ್ತ ಕಟಾವು ಯಂತ್ರದ ಬಾಡಿಗೆ ದರವನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ ₹ 2,500ದಿಂದ ₹ 3 ಸಾವಿರ ಬಾಡಿಗೆ ಹಣ ನಿಗದಿ ಪಡಿಸುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಆದ್ದರಿಂದ ಭತ್ತ ಕಟಾವು ಯಂತ್ರದ ಬಾಡಿಗೆ ದರವನ್ನು ಇಲಾಖೆ ನಿಗದಿ ಪಡಿಸಿ ಆದೇಶ ಹೊರಡಿಸಿದೆ ಎಂದಿದ್ದಾರೆ.

ಕೋವಿಡ್-19 ಸೋಂಕಿನ ಸಂಕಷ್ಟದ ಸಂದರ್ಭದಲ್ಲಿ ಚೈನ್‍ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ₹ 2,300, ಟೈರ್‌ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ₹ 1,500 ಮೀರದಂತೆ ಬಾಡಿಗೆ ನಿಗದಿ ಮಾಡಬೇಕು. ಇದು ತಪ್ಪಿದಲ್ಲಿ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಎಂ.ಮಹಾಂತೇಶಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು