ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರೀದಿ ಕೇಂದ್ರಗಳ ಮೂಲಕ ಭತ್ತ ಮಾರಾಟಕ್ಕೆ ಕರೆ

Last Updated 13 ನವೆಂಬರ್ 2020, 2:10 IST
ಅಕ್ಷರ ಗಾತ್ರ

ಮೈಸೂರು: 2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರು ಬೆಳೆದ ಭತ್ತವನ್ನು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕರ್ನಾಟಕ ಸರ್ಕಾರವು ಆದೇಶಿಸಿದೆ. ಅದರಂತೆ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಕಾರ್ಯಪಡೆಯ ತೀರ್ಮಾನದಂತೆ ಉತ್ತಮ ಗುಣಮಟ್ಟದ ಭತ್ತವನ್ನು ರೈತರಿಂದ ಖರೀದಿಸಲು ಕ್ರಮವಹಿಸಲಾಗಿದೆ.

ಈ ಸಂಬಂಧ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ತಾವು ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರಗಳ ಮೂಲಕ ಮಾರಾಟ ಮಾಡಲು ಕೋರಲಾಗಿದೆ.

ಭತ್ತ ಖರೀದಿಸಲು ಮೈಸೂರಿ ನಲ್ಲಿರುವ ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾಮಂಡಳಿಯನ್ನು ಏಜೆನ್ಸಿಯನ್ನಾಗಿ ನೇಮಿಸಿದ್ದು, ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಲ್‍ಗೆ ಕನಿಷ್ಟ ಬೆಂಬಲ ಬೆಲೆ ₹ 1,868 ಹಾಗೂ ಗ್ರೇಡ್ ಎ ಭತ್ತಕ್ಕೆ ₹ 1,888 ನಿಗದಿಪಡಿಸಲಾಗಿದೆ.

ಭತ್ತ ಖರೀದಿಗೆ ನೋಂದಣಿ ಆರಂಭವಾಗಿದ್ದು, ರೈತರು ನ.30ರಿಂದ ಡಿ.30ರೊಳಗೆ ನೋಂದಾಯಿಸಿ ಕೊಳ್ಳಬಹುದು. ನೋಂದಾಯಿ ಸಿಕೊಂಡ ಸಣ್ಣ ಮತ್ತು ಅತೀ ಸಣ್ಣ ರೈತರಿಂದ ಮಾತ್ರ ಗರಿಷ್ಠ 40 ಕ್ವಿಂಟಲ್ ಭತ್ತವನ್ನು ಖರೀದಿಸಲಾಗುವುದು.

2021ರ ಮಾರ್ಚ್ 20 ರೊಳಗೆ ಮಾತ್ರ ಭತ್ತ ಖರೀದಿಸಲಾಗುವುದು. ಮಧ್ಯವರ್ತಿಗಳು/ಏಜೆಂಟ್‌ಗಳು ಖರೀದಿ ಕೇಂದ್ರಗಳಿಗೆ ಭತ್ತ ತಂದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿಯ ಅಧ್ಯಕ್ಷರೂ ಆಗಿರುವ ರೋಹಿಣಿ ಸಿಂಧೂರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT