ಮಂಗಳವಾರ, ಮಾರ್ಚ್ 28, 2023
33 °C
ಜಯಮೃತ್ಯುಂಜಯ ಸ್ವಾಮೀಜಿ ಕಾವಿ ಕಳಚಿ ಹೋರಾಟಕ್ಕೆ ಬರಲಿ

‘2ಎ’ಗೆ ಪಂಚಮಸಾಲಿ ಸೇರ್ಪಡೆ ಬೇಡ: ಪುಟ್ಟಸಿದ್ದಶೆಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಪಂಚಮಸಾಲಿ ಸಮುದಾಯವನ್ನು ಯಾವುದೇ ಕಾರಣಕ್ಕೂ 2ಎ ಮೀಸಲಾತಿಗೆ ಸೇರಿಸಬಾರದು. ಸಂವಿಧಾನದ ಚೌಕಟ್ಟನ್ನು ಮೀರಿ ಅವರನ್ನು ಸೇರಿಸಿದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು’ ಎಂದು ರಾಜ್ಯ ಕಾಯಕ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕೆ.ಸಿ.ಪುಟ್ಟಸಿದ್ದಶೆಟ್ಟಿ ಎಚ್ಚರಿಸಿದರು.

ನಗರದಲ್ಲಿ ಶನಿವಾರ ಕಾಯಕ ಸಮಾಜಗಳ ಒಕ್ಕೂಟದ ಸಭೆಯಲ್ಲಿ ಮಾತನಾಡಿದ ಅವರು, ‘ಈ ಸಂಬಂಧ ಇದೇ 20 ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ. ಮುಖ್ಯಮಂತ್ರಿ, ಸಮಾಜ ಕಲ್ಯಾಣ ಇಲಾಖೆ ಸಚಿವರು ಮತ್ತು ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಲಾಗುವುದು’ ಎಂದು ಹೇಳಿದರು.

‘ಪಂಚಮಸಾಲಿಗಳು ಗಡುವು ವಿಧಿಸಿದ್ದಾರೆಂದು ತರಾತುರಿಯಲ್ಲಿ ತೀರ್ಮಾನ ಕೈಗೊಳ್ಳಬಾರದು. ತೀರ್ಮಾನಿಸುವುದೇ ಆದರೆ ಕಾಯಕ ಸಮಾಜದ ಮುಖಂಡರ ಸಮಾಧಿಯ ಮೇಲೆ ನಿಲ್ಲಬೇಕಾಗುತ್ತದೆ. ನಾವು ಜೀವ ಕೊಡಲು ಸಿದ್ಧರಾಗಿದ್ದೇವೆ. ಸಮುದಾಯದ ಮಂದಿ ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಗಂಟುಮೂಟೆ ಕಟ್ಟಿಸಿ ಮನೆಗೆ ಕಳುಹಿಸುತ್ತಾರೆ’ ಎಂದು ಎಚ್ಚರಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು