ಮೈಸೂರು: ‘ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ (ಪಿಎಸ್ಎಸ್ಕೆ) ಮಂಗಳವಾರ (ಆ.11) ನಾಡಿನ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಪೂಜೆ ನೆರವೇರಿಸಲಾಗುವುದು. ಆ.20ರಿಂದ ಕಬ್ಬು ಅರೆಯುವಿಕೆ ಆರಂಭವಾಗಲಿದೆ’ ಎಂದು ಬಿಜೆಪಿ ಶಾಸಕ, ನಿರಾಣಿ ಸಕ್ಕರೆ ಕಾರ್ಖಾನೆ ಸಮೂಹದ ಅಧ್ಯಕ್ಷ ಮುರುಗೇಶ ನಿರಾಣಿ ಸೋಮವಾರ ಇಲ್ಲಿ ತಿಳಿಸಿದರು.

‘ರೈತರು, ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಖಾನೆಗೆ ಕಾಯಕಲ್ಪ ಕೊಡುವೆ. ಈ ಹಿಂದಿದ್ದ ಎಲ್ಲ ನೌಕರರನ್ನು ಮುಂದುವರಿಸಲಾಗುವುದು. ಹೊಸ ನೇಮಕಾತಿಯಲ್ಲಿ ಮೈಸೂರು, ಮಂಡ್ಯ ಭಾಗದವರಿಗೆ ಆದ್ಯತೆ ನೀಡಲಾಗುವುದು’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

‘ಮೈಸೂರು ಜಿಲ್ಲೆಯ ಕೆ.ಆರ್.ನಗರದ ಶ್ರೀರಾಮ ಸಕ್ಕರೆ ಕಾರ್ಖಾನೆಯ ಗುತ್ತಿಗೆಯೂ ನಮಗೆ ಸಿಕ್ಕಿದೆ. ಮುಂದಿನ ವರ್ಷ ಕಬ್ಬು ಅರೆಯಲಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.