ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ‘ಪ್ರತಿ ಜಿಲ್ಲೆಯಲ್ಲಿ 50 ಕೆರೆ ಅಭಿವೃದ್ಧಿ’

Last Updated 30 ಜೂನ್ 2022, 13:30 IST
ಅಕ್ಷರ ಗಾತ್ರ

ಮೈಸೂರು: ‘ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಲಶಕ್ತಿ ಅಭಿಯಾನದಡಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಕರೆಗಳನ್ನು ಅಭಿವೃದ್ಧಿಪಡಿಸಿ ಅಂತರ್ಜಲ ಮಟ್ಟ ಹೆಚ್ಚಿಸಲು ಕ್ರಮ ವಹಿಸಲಾಗಿದೆ’ ಎಂದು ಕೇಂದ್ರ ಜಲಶಕ್ತಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ರಾಜ್ಯ ಸಚಿವ ಬಿಶ್ವೇಶ್ವರ ಟುಡು ತಿಳಿಸಿದರು.

ತಾಲ್ಲೂಕಿನ ನಾಗವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗವಾಲ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಜಲಶಕ್ತಿ ಅಭಿಯಾನದಡಿ ಕೈಗೊಂಡಿರುವ ಕಲ್ಯಾಣಿ ಪುನಶ್ಚೇತನ ಹಾಗೂ ಸಾಕದೇವಮ್ಮನ ಕಟ್ಟೆ ನಿರ್ಮಾಣ ಕಾಮಗಾರಿಯನ್ನು ಸಂಸತ್ತಿನ ಸಲಹಾ ಸಮಿತಿ ಸದಸ್ಯರೊಂದಿಗೆ ಗುರುವಾರ ವೀಕ್ಷಿಸಿದ ನಂತರ ಅವರು ಮಾತನಾಡಿದರು.

‘ಜಲಶಕ್ತಿ ಅಭಿಯಾನದಡಿ ಹಲವು ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರನ್ನು ಪೂರೈಸಲು ಜಲಜೀವನ ಯೋಜನೆ ರೂಪಿಸಲಾಗಿದೆ. ಅಂತರ್ಜಲ ಅಭಿವೃದ್ದಿಪಡಿಸಲು ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗುತ್ತಿದೆ. ರಾಜ್ಯ ಸರ್ಕಾರದಿಂದಲೂ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ’ ಎಂದು ಹೇಳಿದರು.

ಮೇಕೆದಾಟು ಕುಡಿಯುವ ನೀರಿನ ಯೋಜನೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ವಿಷಯದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯ ಸರ್ಕಾರಗಳು ಸೂಕ್ತ ತೀರ್ಮಾನಕ್ಕೆ ಬರಬೇಕು’ ಎಂದರು.

ಸಂಸತ್ತಿನ ಸಲಹಾ ಸಮಿತಿ ಸದಸ್ಯರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಆಯುಕ್ತೆ ಶಿಲ್ಪಾ ನಾಗ್, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ, ಉಪ ಕಾರ್ಯದರ್ಶಿ (ಅಭಿವೃದ್ಧಿ) ಡಾ.ಎಂ. ಕೃಷ್ಣರಾಜು, ಸಹಾಯಕ ಕಾರ್ಯದರ್ಶಿ ವಿ.ಪಿ‌. ಕುಲದೀಪ್, ಮೈಸೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ರಮೇಶ್, ಸಹಾಯಕ ನಿರ್ದೇಶಕ (ಗ್ರಾ.ಉ.) ಕೆ.ಎಂ. ರಘುನಾಥ್, ಪಿಡಿಒ ಡಾ.ಶೋಭಾರಾಣಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT