ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಹಿಂದುಳಿದ ಮೋರ್ಚಾದಿಂದ ಅರಳಿ ಸಸಿ ನೆಡುವ ಕಾರ್ಯಕ್ರಮ

Last Updated 18 ಸೆಪ್ಟೆಂಬರ್ 2022, 7:14 IST
ಅಕ್ಷರ ಗಾತ್ರ

ಮೈಸೂರು: ಬಿಜೆಪಿ ನಗರ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಸೇವಾ ಪಾಕ್ಷಿಕದ ಅಡಿಯಲ್ಲಿ ಅರಳಿ‌ ಗಿಡ ನೆಡುವ ಅಭಿಯಾನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇಲ್ಲಿನ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಭಾನುವಾರ ಚಾಲನೆ ನೀಡಿದರು.

ಪ್ರಧಾನಿ‌ ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ‌ ಸಂದರ್ಭದಲ್ಲಿ ಮಾತನಾಡಿದ ಶ್ರೀನಿವಾಸ ಪೂಜಾರಿ, 'ಪರಿಸರ ನಮ್ಮೆಲ್ಲರ ಆಸ್ತಿ. ಅದನ್ನು ಉಳಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದವರು ಯಾವುದೇ ಆಡಂಬರವಿಲ್ಲದೆ ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಆಚರಿಸುತ್ತಿರುವುದು ವಿಶೇಷವಾಗಿದೆ. ಇದು ದೇಶಕ್ಕೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ಕಾರ್ಯಕ್ರಮವಾಗಿದೆ. ವಾಯು ಮಾಲಿನ್ಯದಿಂದ ಆಗುವ ಅನಾಹುತ ತಡೆಯುವುದಕ್ಕೂ ಇದು ಸಹಕಾರಿಯಾಗಿದೆ. ಈ ಮೂಲಕ ಪಕ್ಷದ ಕಾರ್ಯಕರ್ತರು ಒಳ್ಳೆಯ ಸೇವೆಯಲ್ಲಿ ತೊಡಗಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಶಾಸಕ ಎಲ್.ನಾಗೇಂದ್ರ ಮಾತನಾಡಿ, 'ಅರಳಿ ಮರ ಶ್ರೇಷ್ಠವಾದುದು. ಸಾರ್ವಜನಿಕರು ಹೆಚ್ಚಿರುವ ಸ್ಥಳಗಳಲ್ಲಿ ಅರಳಿಮರದ ಅವಶ್ಯಕತೆ ಇದೆ. ಉದ್ಯಾನಗಳಲ್ಲಿ ಆ ಸಸಿಗಳನ್ನು ನೆಟ್ಟು ಬೆಳೆಸಬೇಕು' ಎಂದರು.

'ನಗರದ ಹೊರವರ್ತುಲ ರಸ್ತೆಯಲ್ಲಿ ಸಾವಿರಾರು ಅರಳಿ ಸಸಿಗಳನ್ನು ಸಂಘ- ಸಂಸ್ಥೆಗಳ ಸಹಯೋಗದಲ್ಲಿ ನೆಟ್ಟು ಬೆಳೆಸಲಾಗುತ್ತಿದೆ' ಎಂದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಟಿ.ಎಸ್. ಶ್ರೀವತ್ಸ, ನಗರ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಜೋಗಿ ಮಂಜು, ಉಪ ಮೇಯರ್ ಡಾ.ರೂಪಾ ಯೋಗೇಶ್, ನಗರಪಾಲಿಕೆ ಸದಸ್ಯ ಸತೀಶ್, ಕೆ.ಜೆ.ರಮೇಶ್, ಪ್ರಧಾನ ಕಾರ್ಯದರ್ಶಿ ಗೋಪಾಲ್‌, ಮಣಿರತ್ನಂ, ಸೋಮಶೇಖರ್ ರಾಜು, ಹರೀಶ್, ಪುನೀತ್, ರಮೇಶ್, ಚಿಕ್ಕಮ್ಮ ಬಸವರಾಜ್, ಶಿವರಾಜ್, ಕೃಷ್ಣ ಮೂರ್ತಿ, ಜಗದೀಶ್, ವಿಜಯ್, ಸೂರಜ್, ಅಂಕಿತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT