ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ವಾರದಲ್ಲಿ ಮೂರು ದಿನ ಕೋಳಿ ಮಾಂಸ ಮಾರಾಟಕ್ಕೆ ಅನುಮತಿ

Last Updated 2 ಏಪ್ರಿಲ್ 2020, 10:40 IST
ಅಕ್ಷರ ಗಾತ್ರ

ಮೈಸೂರು: ಮೈಸೂರಿನ ಕೆಲವು ಪ್ರದೇಶಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದರಿಂದ ಕೋಳಿ ಮಾಂಸ ಮಾರಾಟಕ್ಕೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ.

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರದಲ್ಲಿ 3 ದಿನ (ಮಂಗಳವಾರ, ಶುಕ್ರವಾರ, ಭಾನುವಾರ) ಬೆಳಿಗ್ಗೆ 6ರಿಂದ ಸಂಜೆ 6ಗಂಟೆವರೆಗೆ ಕೋಳಿ ಮಾಂಸ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಮಾರ್ಚ್ 16ರಂದು ಕುಂಬಾರಕೊಪ್ಪಲು ವ್ಯಾಪ್ತಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿತ್ತು. ಮಾರ್ಚ್ 28ರಿಂದ ಈ ಪ್ರದೇಶದಲ್ಲಿ ಯಾವುದೇ ರೋಗಲಕ್ಷಗಳು ಕಂಡುಬಂದಿಲ್ಲ ಎಂದು ಪಶುಪಾಲನಾ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಆದ್ದರಿಂದ ಮಾರಾಟಕ್ಕೆ ಅನುಮತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT