ಗುರುವಾರ , ಜೂನ್ 24, 2021
22 °C

ಹಿರಿಯ ಛಾಯಾಗ್ರಾಹಕ ನೇತ್ರರಾಜು ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಹಿರಿಯ ಛಾಯಾಗ್ರಾಹಕ ನೇತ್ರರಾಜು (62) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ.

ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ ಹರಿಶ್ಚಂದ್ರಘಾಟ್‌ನಲ್ಲಿ ನೆರವೇರಲಿದೆ.

ನೇತ್ರರಾಜು ಎಂದೇ ಪ್ರಸಿದ್ಧರಾಗಿದ್ದ ನಾಗೇಂದ್ರ ಕುಮಾರ್‌ ಜೈನ್‌, ಹಲವು ಕನ್ನಡ ಮತ್ತು ಆಂಗ್ಲ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ಅವರ ಛಾಯಾಚಿತ್ರಗಳು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿದ್ದವು. 2014ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದರು.

2019ರ ದಸರಾ ಸಮಯದಲ್ಲಿ ತಾಯಿ ಮತ್ತು ಮಗು ಬೆಳಕಿನಿಂದ ಕಂಗೊಳಿಸುತ್ತಿರುವ ಅರಮನೆಯ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದ ದೃಶ್ಯವನ್ನು ಕ್ಲಿಕ್ಕಿಸಿದ್ದರು. ಈ ಚಿತ್ರ ಅಪಾರ ಮೆಚ್ಚುಗೆ ಗಳಿಸಿತ್ತಲ್ಲದೇ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು