ಕಾಡುಹಂದಿ ಸಾಗಣೆ; ಇಬ್ಬರ ಬಂಧನ

ಗುರುವಾರ , ಜೂನ್ 27, 2019
30 °C

ಕಾಡುಹಂದಿ ಸಾಗಣೆ; ಇಬ್ಬರ ಬಂಧನ

Published:
Updated:

ಮೈಸೂರು: ಕಾಡುಹಂದಿಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸ್ ಅರಣ್ಯ ಸಂಚಾರ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಸಾತಗಳ್ಳಿ ಗ್ರಾಮದ ಮಂಜುನಾಥ್ ಮತ್ತು ಮಂಜು ಬಂಧಿತರು. ಇವರು ವಾಹನದಲ್ಲಿ ಎರಡು ಕಾಡುಹಂದಿಗಳ ಸಾಗಿಸುತ್ತಿದ್ದ ವೇಳೆ ನಂಜನಗೂಡು ತಾಲ್ಲೂಕಿನ ಹಳ್ಳಿದಿಡ್ಡಿ ಗ್ರಾಮದ ಬಸ್‌ನಿಲ್ದಾಣದ ಬಳಿ ಅಧಿಕಾರಿಗಳು ಹಿಡಿದು, ಕಾಡುಹಂದಿಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸ್ ಅರಣ್ಯ ಸಂಚಾರ ದಳದ ಸಿಬ್ಬಂದಿ ಎಚ್.ಕೆ.ವೆಂಕಟಾಚಲಯ್ಯ, ಎಚ್.ನರಸಿಂಹಮೂರ್ತಿ, ಟಿ.ಆರ್.ರಘು, ಎಲ್.ಚಲುವರಾಜು, ಎಲ್.ಮಂಜುನಾಥ್, ಪ್ರದೀಪ್ ಕಾರ್ಯಾಚರಣೆಯಲ್ಲಿ ಇದ್ದರು.

ಮಹಿಳೆ ಆತ್ಮಹತ್ಯೆ

ಮೈಸೂರು ತಾಲ್ಲೂಕಿನ ರಮ್ಮನಹಳ್ಳಿ ನಿವಾಸಿ ಮಂಗಳಮ್ಮ (43) ಹೆಚ್ಚು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರ ಪತಿ ಮೃತಪಟ್ಟಿದ್ದರು. ಪುತ್ರರೊಬ್ಬರು ಇವರ ಜತೆಗಿದ್ದರು. ಪದೇ ಪದೇ ಕಾಡುತ್ತಿದ್ದ ಅನಾರೋಗ್ಯದಿಂದ ಬೇಸರಗೊಂಡು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೈಸೂರು ದಕ್ಷಿಣ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !