ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಹಿಣಿ ಸಿಂಧೂರಿ ಅಮಾನತಿಗೆ ಎಂ.ಎನ್‌.ಪಿಳ್ಳಪ್ಪ ಆಗ್ರಹ

ನಿಯಮ ಉಲ್ಲಂಘಿಸಿ ಈಜುಕೊಳ ನಿರ್ಮಾಣ: ಪಿಳ್ಳಪ್ಪ
Last Updated 3 ಜುಲೈ 2021, 8:23 IST
ಅಕ್ಷರ ಗಾತ್ರ

ಮೈಸೂರು: ‘ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ನಿಯಮ ಉಲ್ಲಂಘಿಸಿ ಜಿಲ್ಲಾಧಿಕಾರಿ ನಿವಾಸದ ಆವರಣದಲ್ಲಿ ₹50 ಲಕ್ಷ ವೆಚ್ಚದಲ್ಲಿ ಈಜುಕೊಳ ನಿರ್ಮಿಸಿಕೊಂಡಿದ್ದಾರೆ. ಅವರನ್ನು ಕೂಡಲೇ ಅಮಾನತುಗೊಳಿಸಬೇಕು’ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಅಧಿಕಾರಿಗಳು ಮತ್ತು ನೌಕರರ ಸಂಘದ ಮಾಜಿ ಅಧ್ಯಕ್ಷ ಎಂ.ಎನ್‌.ಪಿಳ್ಳಪ್ಪ ಆಗ್ರಹಿಸಿದರು.

‘ಶಾಸಕರೊಬ್ಬರು ಸರ್ಕಾರಿ ಜಾಗದಲ್ಲಿ ಕಲ್ಯಾಣ ಮಂಟಪ ನಿರ್ಮಿಸಿದ್ದಾರೆ ಎಂದು ರೋಹಿಣಿ ಸಿಂಧೂರಿ ಆರೋಪಿಸಿದ್ದರು. ಆದರೆ, ಅದು ಆಧಾರರಹಿತ ಎಂಬುದು ಸಾಬೀತಾಗಿದೆ. ಈ ಹಿಂದೆ ರೋಹಿಣಿ ಅವರು ಮುಜರಾಯಿ ಇಲಾಖೆ ಆಯುಕ್ತರಾಗಿದ್ದ ಸಂದರ್ಭದಲ್ಲಿ, ತಿರುಪತಿಯಲ್ಲಿ ಮೈಸೂರು ಮಹಾರಾಜರ ಕಾಲದ ಜಾಗವನ್ನು ಆಂಧ್ರ ಸರ್ಕಾರಕ್ಕೆ ಹಾಗೂ ಗುತ್ತಿಗೆದಾರರಿಗೆ ಹಸ್ತಾಂತರ ಮಾಡಿದ್ದಾರೆ ಎಂಬ ಆರೋಪವಿದೆ. ಈ ಬಗ್ಗೆಯೂ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು’ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಒತ್ತಾಯಿಸಿದರು.

‘ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟಿದ್ದು, ಈ ಪ್ರಕರಣದಲ್ಲಿ ರೋಹಿಣಿ ಅವರ ಪಾತ್ರ ಎಷ್ಟಿದೆ ಎಂಬುದನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು. ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದಾಗ, ಶೌಚಾಲಯ ನಿರ್ಮಾಣ ಸಂಬಂಧ ಸುಳ್ಳು ಲೆಕ್ಕ ತೋರಿಸಿ ಕೇಂದ್ರ ಸರ್ಕಾರದಿಂದ ಪ್ರಶಸ್ತಿ ಪಡೆದಿದ್ದಾರೆ ಎಂಬ ಆಪಾದನೆ ಇದೆ. ಇದರ ಬಗ್ಗೆಯೂ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT