ರೈತ ಆತ್ಮಹತ್ಯೆ
ಪಿರಿಯಾಪಟ್ಟಣ: ತಾಲ್ಲೂಕಿನ ತಂದ್ರೆಗುಡಿ ಕೊಪ್ಪಲು ರೈತ ಮಲ್ಲೇಶ್ (52) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಲ್ಲೇಶ್ ಅವರಿಗೆ ತಂದೆ ಹೆಸರಿನಲ್ಲಿ ಒಂದು ಎಕರೆ ಜಮೀನು ಇದೆ. ಸಹಕಾರ ಸಂಘದಲ್ಲಿ ₹30 ಸಾವಿರ ಹಾಗೂ ಟ್ರಾಕ್ಟರ್ ಖರೀದಿಗೆ ಖಾಸಗಿ ಬ್ಯಾಂಕ್‌ನಲ್ಲಿ ₹7 ಲಕ್ಷ ಸಾಲ ಮಾಡಿದ್ದರು. ನಿರೀಕ್ಷಿತ ಬೆಳೆ ಬರದಿದ್ದರಿಂದ ಶುಕ್ರವಾರ ಸಂಜೆ ಜಮೀನಿಗೆ ತೆರಳಿ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಬೆಳಿಗ್ಗೆ ಜಮೀನಿಗೆ ಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಮೃತರ ಪತ್ನಿ ಸಾಕಮ್ಮ ತಿಳಿಸಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.