ಭಾನುವಾರ, ಜೂನ್ 26, 2022
21 °C

ಮೈಸೂರನ್ನು ಪ್ಯಾರಿಸ್‌ ಮಾಡುವೆ ಎಂದಿರಲಿಲ್ಲ ಪ್ರಧಾನಿ ಮೋದಿ: ಪ್ರತಾಪ ಸಿಂಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೈಸೂರನ್ನು ಪ್ಯಾರಿಸ್ ಮಾಡುವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರಲಿಲ್ಲ. ಅವರ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ಬಾರಿ ನರೇಂದ್ರ ಮೋದಿ ಅವರು ಇಲ್ಲಿಗೆ ಬಂದಿದ್ದಾಗ ಮೈಸೂರನ್ನು ಪ್ಯಾರಿಸ್ ಮಾಡುವೆ ಎಂದಿರಲಿಲ್ಲ. ಆಗ ವಿಶ್ವದ ಅತಿ ಹೆಚ್ಚು ಪ್ರವಾಸಿಗರನ್ನು ಪ್ಯಾರಿಸ್ ಸೆಳೆಯುತ್ತಿತ್ತು. ಅದೇ ತರಹ ಮೈಸೂರಿಗೆ ಪ್ರವಾಸಿಗಳನ್ನು ಸೆಳೆಯುವ ಶಕ್ತಿ ಇದೆ ಎಂದಿದ್ದರು. ಅದಕ್ಕಾಗಿ ವಿಮಾನಯಾನ ಸೌಲಭ್ಯ ಸೇರಿದಂತೆ ಹಲವು ಕೊಡುಗೆಗಳನ್ನು ಮೈಸೂರಿಗೆ ನೀಡಿದ್ದಾರೆ’ ಎಂದು ಹೇಳಿದರು.

ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲು ಮೋದಿ ಅವರು ಜೂನ್ 21ರಂದು ನಗರಕ್ಕೆ ಆಗಮಿಸುವುದು ಬಹುತೇಕ ಖಚಿತ ಎಂದು ಎಸ್.ಟಿ.ಸೋಮಶೇಖರ್ ತಿಳಿಸಿದರು.

ಓದಿ...ಕೈತಪ್ಪಿದ ಟಿಕೆಟ್: ಸೌಜನ್ಯದಿಂದ ವರ್ತಿಸುವಂತೆ ಬೆಂಬಲಿಗರಿಗೆ ವಿಜಯೇಂದ್ರ ಮನವಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು