ವಿಷಪೂರಿತ ಪ್ರಸಾದ ಸೇವನೆ: ಸಾವಿನ ಸಂಖ್ಯೆ 13ಕ್ಕೆ ಏರಿಕೆ

7

ವಿಷಪೂರಿತ ಪ್ರಸಾದ ಸೇವನೆ: ಸಾವಿನ ಸಂಖ್ಯೆ 13ಕ್ಕೆ ಏರಿಕೆ

Published:
Updated:

ಮೈಸೂರು: ವಿಷಪೂರಿತ ಪ್ರಸಾದ ಸೇವಿಸಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿದೆ.

ಭಾನುವಾರ ಬೆಳಿಗ್ಗೆ ಅಪೊಲೊ ಆಸ್ಪತ್ರೆಯಲ್ಲಿ ಮಗೇಶ್ವರಿ (35) ಹಾಗೂ ಸಾಲಮ್ಮ (35) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದೇ ಆಸ್ಪತ್ರೆಯಲ್ಲಿ ಇನ್ನೂ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ.


ಮಗೇಶ್ವರಿ

ಸಾಲಮ್ಮ ಚಾಮರಾಜನಗರದ ಬಿದರಳ್ಳಿ ಗ್ರಾಮಸ್ಥರು. ಮಗೇಶ್ವರಿ ಎಂ.ಜಿ.ದೊಡ್ಡಿ ಗ್ರಾಮದವರು. ಇವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ.

ಮೈಸೂರಿನಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 94 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆ.ಆರ್.ಆಸ್ಪತ್ರೆಯಲ್ಲಿ 24 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 1

  Sad
 • 1

  Frustrated
 • 2

  Angry

Comments:

0 comments

Write the first review for this !