ಬುಧವಾರ, ಜನವರಿ 22, 2020
20 °C

ಕಾರಾಗೃಹಕ್ಕೆ ತನ್ವೀರ್ ಕರೆತಂದ ಪೊಲೀಸರು: ಆರೋಪಿ ಪತ್ತೆ ಪ್ರಕ್ರಿಯೆಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಹಲ್ಲೆಗೆ ಒಳಗಾಗಿದ್ದ ಶಾಸಕ ತನ್ವೀರ್ ಸೇಠ್ ಅವರನ್ನು ಆರೋಪಿಯ ಗುರುತು ಪತ್ತೆಗಾಗಿ ಮೈಸೂರು ಕೇಂದ್ರ ಕಾರಾಗೃಹಕ್ಕೆ ಗುರುವಾರ ಕರೆದುಕೊಂಡು ಬರಲಾಯಿತು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಅವರ ಬೆಂಬಲಿಗರು ಸೇರಿದ್ದರಿಂದ ನೂಕುನುಗ್ಗಲು ಉಂಟಾಯಿತು.

ನವೆಂಬರ್‌ನಲ್ಲಿ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದ ತನ್ವೀರ್ ಸೇಠ್ ಮೇಲೆ ಫರ್ಹಾನ್ ಪಾಷಾ ಎಂಬಾತ ತೀವ್ರತರವಾದ ಹಲ್ಲೆ ನಡೆಸಿದ್ದ. ತಕ್ಷಣವೇ ಈತನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಈಗ ಆರೋಪಿಯ ಗುರುತನ್ನು ತನ್ವೀರ್ ಸೇಠ್ ಪತ್ತೆ ಹಚ್ಚಬೇಕಿದೆ. ಹಾಗಾಗಿ ವಿಶ್ರಾಂತಿಯಲ್ಲಿದ್ದ ಅವರನ್ನು ಕಾರಾಗೃಹಕ್ಕೆ ಕರೆದುಕೊಂಡು ಬರಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು