ಜಿಲ್ಲೆಯಲ್ಲಿ 6,159 ಪೊಲೀಸರ ನಿಯೋಜನೆ

ಬುಧವಾರ, ಏಪ್ರಿಲ್ 24, 2019
23 °C
ಶಾಂತಿಯುತ ಮತದಾನಕ್ಕೆ ಬಿಗಿ ಪೊಲೀಸ್‌ ಬಂದೋಬಸ್ತ್

ಜಿಲ್ಲೆಯಲ್ಲಿ 6,159 ಪೊಲೀಸರ ನಿಯೋಜನೆ

Published:
Updated:

ಮೈಸೂರು: ಲೋಕಸಭೆ ಚುನಾವಣೆಯ ಮತದಾನ ಶಾಂತಿಯುತವಾಗಿ ನಡೆಯಲು ಪೊಲೀಸ್‌ ಇಲಾಖೆ ಎಲ್ಲ ಕ್ರಮಗಳನ್ನು ಕೈಗೊಂಡಿದ್ದು, ಮೈಸೂರು ನಗರ ಮತ್ತು ಜಿಲ್ಲೆಯ ಇತರೆಡೆಗಳಲ್ಲಿ ಒಟ್ಟು 6,159 ಪೊಲೀಸರನ್ನು ನಿಯೋಜಿಸಲಾಗಿದೆ.‌

ಮೈಸೂರು ನಗರ ವ್ಯಾಪ್ತಿಯಲ್ಲಿ ಒಟ್ಟು 968 ಮತಗಟ್ಟೆಗಳಿದ್ದು, ಬಂದೋಬಸ್ತ್‌ಗಾಗಿ 3,159 ಪೊಲೀಸರನ್ನು ನಿಯೋಜಿಸಲಾಗಿದೆ. ಇದರಲ್ಲಿ ರಾಜ್ಯ ಪೊಲೀಸ್‌ ಮತ್ತು ಗೃಹ ರಕ್ಷಕ ದಳದ 1,562 ಸಿಬ್ಬಂದಿ ಇದ್ದಾರೆ. 59 ಸೆಕ್ಟರ್‌ ಮೊಬೈಲ್‌ ದಳ, ಕೆಎಸ್‌ಆರ್‌ಪಿಯ 4 ತುಕಡಿ, 20 ಸಿಎಆರ್‌ ತುಕಡಿ ಮತ್ತು ಆಶ್ವದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಕೆ.ಟಿ.ಬಾಲಕೃಷ್ಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಗರ ವ್ಯಾಪ್ತಿಯಲ್ಲಿ 824 ಮಂದಿಯ ವಿರುದ್ಧ ಮುನ್ನೆಚ್ಚರಿಕೆ ಪ್ರಕರಣ ದಾಖಲಿಸಲಾಗಿದ್ದು, 8 ರೌಡಿಗಳನ್ನು ಗಡಿಪಾರು ಮಾಡಲಾಗಿದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮಿತ್‌ ಸಿಂಗ್‌ ಮಾತನಾಡಿ, ಮೈಸೂರು ನಗರ ಹೊರತುಪಡಿಸಿ ಜಿಲ್ಲೆಯಾದ್ಯಂತ ಮತದಾನದ ದಿನ ಕರ್ತವ್ಯಕ್ಕೆ ಅಧಿಕಾರಿಗಳು ಒಳಗೊಂಡಂತೆ 3000 ಪೊಲೀಸರನ್ನು ನಿಯೋಜಿಸಲಾಗಿದೆ. 1,880 ಮಂದಿ ವಿರುದ್ಧ ಮುನ್ನೆಚ್ಚರಿಕೆ ಪ್ರಕರಣ ದಾಖಲಿಸಿಕೊಂಡಿದ್ದು, 36 ರೌಡಿಗಳನ್ನು ಗಡಿಪಾರು ಮಾಡಲಾಗಿದೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !