ಭಾನುವಾರ, ಸೆಪ್ಟೆಂಬರ್ 22, 2019
22 °C

ಮೈಸೂರು: ಕಳ್ಳರ ಮೇಲೆ ಪೊಲೀಸರ ಗುಂಡಿನ ದಾಳಿ, ವ್ಯಕ್ತಿ ಸಾವು

Published:
Updated:

ಮೈಸೂರು: ಇಲ್ಲಿನ ರಿಂಗ್ ರಸ್ತೆಯಲ್ಲಿ ಹಣ ದ್ವಿಗುಣದ (ಮನಿ ಡಬ್ಲಿಂಗ್) ಅವ್ಯವಹಾರದಲ್ಲಿ ತೊಡಗಿದ್ದ ಕಳ್ಳರ ಗುಂಪಿನ ಮೇಲೆ ವಿಜಯನಗರ ಠಾಣೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆಯಲ್ಲಿ ಒಬ್ಬ ಕಳ್ಳ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಜತೆಗೆ, ಮೂವರು ಪೊಲೀಸರು ಗಾಯಗೊಂಡಿದ್ದು, ಕೆ.ಆರ್‌.ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಸುತ್ತಮುತ್ತ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ. 

ಬೆಳಿಗ್ಗೆ 10 ಗಂಟೆಗೆ ಗುಂಡಿನೇಟಿನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಆಸ್ಪತ್ರೆಗೆ ತರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪರಾರಿಯಾದವರ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದಾರೆ.

Post Comments (+)