ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಏ.14ರವರೆಗೂ ನಿಷೇಧಾಜ್ಞೆ ವಿಸ್ತರಣೆ

Last Updated 3 ಏಪ್ರಿಲ್ 2020, 10:38 IST
ಅಕ್ಷರ ಗಾತ್ರ

ಮೈಸೂರು: ರಾಜ್ಯದ ಎಲ್ಲೆಡೆ ಹೆಚ್ಚಿನ ಜನರಲ್ಲಿ ಕೊರೊನಾ ವೈರಸ್ ರೋಗಾಣು ಹರಡುತ್ತಿದ್ದು, ಮೈಸೂರು ನಗರದಲ್ಲಿಯೂ ಪತ್ತೆಯಾದ ಹಿನ್ನೆಲೆಯಲ್ಲಿ, ಮಾರ್ಚ್ 31ರವರೆಗೆ ಜಾರಿಯಲ್ಲಿದ್ದ ನಿಷೇಧಾಜ್ಞೆಯನ್ನು ಏ.14ರವರೆಗೂ ವಿಸ್ತರಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ಕೊರೊನಾ ವೈರಸ್ ರೋಗಾಣು ದಿನದಿಂದ ದಿನಕ್ಕೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೈಸೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಗತ್ಯ ಸೇವೆ ಹೊರತುಪಡಿಸಿ, ಐವರಿಗಿಂತ ಹೆಚ್ಚು ಸಾರ್ವಜನಿಕರು ಒಟ್ಟಾಗಿ ಸೇರುವುದನ್ನು ನಿರ್ಬಂಧಿಸಿ ನಿಷೇಧಾಜ್ಞೆಯನ್ನು ಘೋಷಿಸಿದ್ದಾರೆ.

ನಿಷೇಧಾಜ್ಞೆ ಸಮಯದಲ್ಲಿ ಸಾರ್ವಜನಿಕರು ಸರ್ಕಾರದ ಆದೇಶದಲ್ಲಿ ನಮೂದಿಸಿದ ತುರ್ತು ಸೇವೆಗಳಿಗೆ ಹೊರತುಪಡಿಸಿ ಇತರೆ ಯಾವುದೇ ಅನವಶ್ಯಕ ಕಾರಣಗಳಿಗಾಗಿ ಮನೆಗಳಿಂದ ಹೊರ ಬಂದು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವುದನ್ನು ಹಾಗೂ ಸೇರುವುದನ್ನು ನಿಷೇಧಾಜ್ಞೆಯ ಉಲ್ಲಂಘನೆ ಎಂದು ಪರಿಗಣಿಸಿ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT