ಬುಧವಾರ, ಅಕ್ಟೋಬರ್ 28, 2020
18 °C

ಮೈಸೂರು: ದೇಶದ್ರೋಹದ ಪ್ರಕರಣ ದಾಖಲಿಸಲು ಆಗ್ರಹಿಸಿ ಪತ್ರ ಚಳವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಮಾದಕವಸ್ತು ಜಾಲದಲ್ಲಿ ಭಾಗಿಯಾಗಿರುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಶನಿವಾರ ಇಲ್ಲಿನ ಪ್ರಧಾನ ಅಂಚೆ ಕಚೇರಿಯ ಮುಂದೆ ಪತ್ರ ಚಳವಳಿ ನಡೆಯಿತು.

ಸರ್ಕಾರ ಯಾವುದೇ ಕಾರಣಕ್ಕೂ ಒತ್ತಡಕ್ಕೆ ಮಣಿಯಬಾರದು. ಎಷ್ಟೇ ಪ್ರಭಾವಿಗಳಿದ್ದರೂ ಅವರ ಮೇಲೆ ಪ್ರಕರಣ ದಾಖಲಿಸಬೇಕು. ಈ ದಂಧೆಯನ್ನು ಮಟ್ಟಹಾಕಲು ಅತ್ಯಂತ ಪ್ರಬಲ ಕಾನೂನು ರೂಪಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

ನಗರ ಸಂಘಟನಾ ಕಾರ್ಯದರ್ಶಿ ಶರತ್, ನಗರ ಸಹ ಕಾರ್ಯದರ್ಶಿಗಳಾದ ಚಿರಂತ್, ಪ್ರಜ್ಞಾ, ಕಾರ್ಯಕರ್ತರಾದ ನಾಗಶ್ರೀ, ರಚನಾ, ಸುಹಾಸ್, ಆದರ್ಶ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು