ರಸ್ತೆ ಗುಂಡಿ; ಮುಖ್ಯಮಂತ್ರಿ ಅಂಗಳಕ್ಕೆ!
ಮೈಸೂರು:‘ಮೈಸೂರು ನಗರದಲ್ಲಿನ ರಸ್ತೆ ಗುಂಡಿಗಳ ವಿಷಯವನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ’ ಎಂದು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಇಲ್ಲಿ ಮಂಗಳವಾರ ತಿಳಿಸಿದರು.
ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ನಗರಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಸ್ತೆ ಗುಂಡಿಗಳೇ ಸ್ವಾಗತ ಕೋರುತ್ತಿವೆಯೆಲ್ಲ ಎಂಬ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಈ ರೀತಿ ಪ್ರತಿಕ್ರಿಯಿಸಿದರು.
‘ಮೇ 28 ಇಲ್ಲವೇ 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿಗೆ ಬಂದು ಈ ಸಂಬಂಧ ಸಭೆ ನಡೆಸುವ ಸಾಧ್ಯತೆ ಇದೆ. ಆಗಲೂ ಮತ್ತೊಮ್ಮೆ ಪ್ರಸ್ತಾಪಿಸಲಾಗುವುದು’ ಎಂದು ಅವರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.