ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಾದ್ಯಂತ ಬಕ್ರೀದ್‌ ವೇಳೆ 6 ಸಾವಿರ ಹಸುಗಳ ರಕ್ಷಣೆ: ಸಚಿವ ಪ್ರಭು ಚವಾಣ್‌

Last Updated 11 ಆಗಸ್ಟ್ 2021, 14:20 IST
ಅಕ್ಷರ ಗಾತ್ರ

ಮೈಸೂರು: ‘ಈ ಬಾರಿಯ ಬಕ್ರೀದ್‌ ಅವಧಿಯಲ್ಲಿ ರಾಜ್ಯದಾದ್ಯಂತ ಸುಮಾರು ಆರು ಸಾವಿರ ಹಸುಗಳ ರಕ್ಷಣೆ ಮಾಡಲಾಗಿದೆ’ ಎಂದು ಪಶುಸಂಗೋಪನಾ ಸಚಿವ ಪ್ರಭು ಚವಾಣ್‌ ತಿಳಿಸಿದರು.

ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಬುಧವಾರ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿ, ‘ಗೋಹತ್ಯೆ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ಬಕ್ರೀದ್‌ ಅವಧಿಯಲ್ಲಿ ಗೋಹತ್ಯೆ ತಡೆಯುವಂತೆ ಎಲ್ಲ ಜಿಲ್ಲೆಗಳ ಎಸ್‌ಪಿಗಳಿಗೆ ಸೂಚನೆ ನೀಡಿದ್ದೆವು. ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರ ಜತೆ, ಇಲಾಖೆಯ ಪಶು ವೈದ್ಯರನ್ನೂ ನಿಯೋಜಿಸಿದ್ದೆವು. ಇದರಿಂದ ಸಾವಿರಾರು ಹಸುಗಳ ರಕ್ಷಣೆ ಆಗಿದೆ. ಗೋಮಾತೆ ಕಸಾಯಿಖಾನೆಗೆ ಸೇರಬಾರದು ಎಂಬುದೇ ನಮ್ಮ ಪ್ರಮುಖ ಉದ್ದೇಶ’ ಎಂದರು.

‘ಪ್ರಾಣಿ ಕಲ್ಯಾಣ ಸಹಾಯವಾಣಿಯನ್ನು ದೇಶದಲ್ಲೇ ಮೊದಲ ಬಾರಿ ಜಾರಿಗೆ ತರಲಾಗಿದೆ. ಈ ಸಹಾಯವಾಣಿಗೆ ಒಂದು ತಿಂಗಳಲ್ಲಿ 10 ಸಾವಿರ ಕರೆಗಳು ಬಂದಿದ್ದು, ಅವುಗಳಲ್ಲಿ ಶೇ 85 ಸಮಸ್ಯೆಗಳನ್ನು ಬಗೆಹರಿಸಿದ್ದೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT