ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿದವರಿಗೆ ಸವಲತ್ತು ಬೇಡ: ಪ್ರತಾಪಸಿಂಹ ತಾಕೀತು

Last Updated 24 ಫೆಬ್ರುವರಿ 2021, 21:32 IST
ಅಕ್ಷರ ಗಾತ್ರ

ಮೈಸೂರು: ಆದಿವಾಸಿಗಳಿಗೆ ನೀಡುವ ಸವಲತ್ತುಗಳನ್ನು, ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿದ ಬುಡಕಟ್ಟು ಜನರಿಗೆ ವಿತರಿಸಬಾರದು ಎಂದು ಸಂಸದ ಪ್ರತಾಪಸಿಂಹ ತಾಕೀತು ಮಾಡಿದರು.

ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.

‘ಕುತ್ತಿಗೆಯಲ್ಲಿ ಶಿಲುಬೆ ಹಾಕಿಕೊಂಡು ಓಡಾಡುವವರನ್ನು ಗುರುತಿಸಬೇಕು. ಅವರಿಗೆ ಸೌಲಭ್ಯ ವಿತರಿಸುತ್ತಿದ್ದರೆ ಕೂಡಲೇ ನಿಲ್ಲಿಸಬೇಕು. ಮೀಸಲಾತಿ ಸೌಲಭ್ಯ ನೀಡಬಾರದು. ಈ ಕುರಿತು ಗಂಭೀರವಾಗಿಗಮನ ಹರಿಸಬೇಕು’ ಎಂದು ತಾಕೀತು ಮಾಡಿದರು.

‘ಸರ್ಕಾರ ನೀಡುವ ಎಲ್ಲ ಸವಲತ್ತುಗಳು ಎಲ್ಲ ಹಾಡಿಗಳ ಜನರಿಗೆ ಸಿಕ್ಕಿದ್ದರೆ ಜನರೇಕೆ ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದುತ್ತಿದ್ದರು? ಎಲ್ಲವನ್ನೂ ಏಸುಸ್ವಾಮಿ ಕೊಟ್ಟ ಎಂದು ಹೇಳಿಕೊಂಡು ಏಕೆ ಓಡಾಡುತ್ತಿದ್ದರು?’ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸವರ್ಣೀಯರ ಬೀದಿಗಳ ಕಡೆಗೂ ಗಮನ ಕೊಡಿ:‘ನರೇಗಾ ಸೇರಿದಂತೆ ಇತರ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ವಾಸವಿರುವ ಕಾಲೊನಿಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಆದರೆ, ಸವರ್ಣೀಯರು ಇರುವ ಕಾಲೊನಿಗಳಲ್ಲಿ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಮುಂದಿನ ದಿನಗಳಲ್ಲಿ ಅವರ ಕಾಲೊನಿಗಳಿಗೂ ಆದ್ಯತೆ ನೀಡಿ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT