ಗುರುವಾರ , ಆಗಸ್ಟ್ 18, 2022
25 °C

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಅಗತ್ಯ ತಯಾರಿ: ಡಿಡಿಪಿಐ ರಾಮಚಂದ್ರರಾಜೇ ಅರಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಜೂನ್ 27ರಿಂದ ಪೂರಕ ಪರೀಕ್ಷೆ ನಡೆಯಲಿದ್ದು, ಇದಕ್ಕೆ ಜಿಲ್ಲೆಯಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ’ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ 2ಸಾವಿರ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿದ್ದಾರೆ. ನಗರದ 3 ಸೇರಿದಂತೆ ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರಶ್ನೆಪತ್ರಿಕೆ, ಉತ್ತರಪತ್ರಿಕೆಗಳು ತಲುಪಿವೆ’ ಎಂದು ಮಾಹಿತಿ ನೀಡಿದರು.

‘ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 38 ಸಾವಿರ ವಿದ್ಯಾರ್ಥಿಗಳು ಹಾಜರಾಗಿದ್ದರು. ಶೇ.92ರಷ್ಟು ಫಲಿತಾಂಶ ಬಂದಿದೆ. ಮುಂದಿನ ಪರೀಕ್ಷೆಯಲ್ಲಿ ಶೇ.95ರಷ್ಟು ಫಲಿತಾಂಶ ಪಡೆಯುವ ಗುರಿ ಇದ್ದು, ಕಾರ್ಯತಂತ್ರ ರೂಪಿಸಲಾಗುವುದು. ಫಲಿತಾಂಶ ಸುಧಾರಣೆಗೆ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.

‘ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಆಯೋಜಿಸಿರುವ ಯೋಗ ಕುರಿತ ವಸ್ತುಪ್ರದರ್ಶನಕ್ಕೆ ಶಾಲೆಗಳಿಂದ ಮಕ್ಕಳನ್ನು ಕರೆತರಲಾಗುತ್ತಿದೆ. ವೀಕ್ಷಿಸಿದ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ನಡೆಸಲಿದ್ದು, ಉತ್ತಮ ಪ್ರಬಂಧಕ್ಕೆ ಬಹುಮಾನ ನೀಡಲಾಗುವುದು. ಗ್ರಾಮೀಣ ಭಾಗದವರಿಗೆ ಅಗತ್ಯಬಿದ್ದರೆ ಬಸ್ ವ್ಯವಸ್ಥೆ ಮಾಡಿಕೊಡಲಾಗುವುದು’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು