ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 1 ಸಾವಿರ ಚಾರ್ಜಿಂಗ್ ಕೇಂದ್ರಕ್ಕೆ ಸಿದ್ಧತೆ– ಸಚಿವ ಸುನಿಲ್‌ ಕುಮಾರ್

Last Updated 25 ಆಗಸ್ಟ್ 2021, 8:24 IST
ಅಕ್ಷರ ಗಾತ್ರ

ಮೈಸೂರು: ರಾಜ್ಯದಲ್ಲಿ ಡಿಸೆಂಬರ್ ಒಳಗೆ 1 ಸಾವಿರ ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಇಂಧನ ಸಚಿವ ಸುನಿಲ್‌ಕುಮಾರ್ ತಿಳಿಸಿದರು.

ಇಲ್ಲಿ ಬುಧವಾರ ನಡೆದ ಸೆಸ್ಕ್ ಪ್ರಗತಿಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಮೈಸೂರು ನಗರದಲ್ಲಿ ಕೇವಲ 2 ಚಾರ್ಜಿಂಗ್ ಕೇಂದ್ರಗಳಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ‘ಕನಿಷ್ಠ ಎಂದರೂ 100ದಿನಗಳ ಒಳಗೆ 100ರಿಂದ 200 ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಬೇಕು’ ಸೂಚಿಸಿದರು.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿದ್ಯುತ್ ನಿಗಮಗಳ ಖಾಸಗೀಕರಣದ ಪ್ರಸ್ತಾವ ಸದ್ಯಕ್ಕೆ ಇಲ್ಲ. ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ವಿದ್ಯುತ್ ಸರಬರಾಜಿನ ಮಸೂದೆ ಕುರಿತು ಮಾಹಿತಿ ಇಲ್ಲ’ ಎಂದು ತಿಳಿಸಿದರು.

‘ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕೋವಿಡ್‌ ಏರಿಳಿತದ ಗತಿಗೆ ಅನುಗುಣವಾಗಿ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗುವುದು. ನಮಗೆ ಗಣೇಶೋತ್ಸವ ಎಷ್ಟು ಮುಖ್ಯವೋ, ಅಷ್ಟೇ ಕೋವಿಡ್ ನಿಯಂತ್ರಣವೂ ಮುಖ್ಯ. ಹಾಗಾಗಿ, ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನಿಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT