ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

6–8ನೇ ತರಗತಿ ಆರಂಭಕ್ಕೆ ಸಿದ್ಧತೆ

ತರಗತಿ ನಡೆಸಲು ಸಿದ್ಧತೆ–ಪೋಷಕರ ಒಪ್ಪಿಗೆ ಪತ್ರ ಅಗತ್ಯ
Last Updated 2 ಸೆಪ್ಟೆಂಬರ್ 2021, 3:36 IST
ಅಕ್ಷರ ಗಾತ್ರ

ಮೈಸೂರು: ಆರರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸೆ.6ರಿಂದ ಭೌತಿಕ ತರಗತಿ ನಡೆಸಲು ಜಿಲ್ಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಸಿದ್ಧತೆ ನಡೆಸಿದ್ದು, ಮಕ್ಕಳಿಗೆ ಮಾಹಿತಿ ರವಾನಿಸುವ ಕಾರ್ಯದಲ್ಲಿ ತೊಡಗಿದೆ.

ಜಿಲ್ಲೆಯಲ್ಲಿ ಒಟ್ಟು 1.33 ಲಕ್ಷ ವಿದ್ಯಾರ್ಥಿಗಳಿದ್ದು, ಕೋವಿಡ್‌ ಮಾರ್ಗಸೂಚಿ ಅನ್ವಯ ತರಗತಿ ನಡೆಸಲು ಶಿಕ್ಷಕರಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಮಾಸ್ಕ್‌ ಧರಿಸುವುದು ಕಡ್ಡಾಯ. ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು. ಆನ್‌ಲೈನ್‌ ಹಾಗೂ ಆಫ್‌ಲೈನ್‌ ಎರಡಕ್ಕೂ ಅವಕಾಶವಿದ್ದು, ಹಾಜರಾತಿ ಕಡ್ಡಾಯ ಮಾಡಿಲ್ಲ. ಶಿಕ್ಷಕರು ಲಸಿಕೆ ಪಡೆದಿರಬೇಕು.

ಕೇರಳ ರಾಜ್ಯ ಗಡಿ ಭಾಗದಲ್ಲಿರುವ ಎಚ್‌.ಡಿ.ಕೋಟೆ ತಾಲ್ಲೂಕಿನಲ್ಲಿ ತರಗತಿ ಆರಂಭಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಗುರುವಾರ ಜಿಲ್ಲಾಧಿಕಾರಿ ಜೊತೆಗಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್‌ ‘ಪ‍್ರಜಾವಾಣಿ’ಗೆ ತಿಳಿಸಿದರು.

ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳಿಂದ ಸೇರಿ ಒಟ್ಟು 12,931 ಶಿಕ್ಷಕರು ಇದ್ದಾರೆ. ಇವರಲ್ಲಿ ಬಹುತೇಕರು ಈಗಾಗಲೇ ಶಾಲೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗಿ ಆನ್‌ಲೈನ್‌ ಬೋಧನೆಯಲ್ಲಿ ತೊಡಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT