ಮಂಗಳವಾರ, ಅಕ್ಟೋಬರ್ 15, 2019
22 °C

ಜೆಎಸ್‌ಎಸ್‌ ಕ್ಯಾಂಪಸ್‌ಗೆ ಶಿಲಾನ್ಯಾಸ ನಾಳೆ: ರಾಷ್ಟ್ರಪತಿ ಭಾಗಿ

Published:
Updated:
Prajavani

ಮೈಸೂರು: ಜೆಎಸ್‌ಎಸ್‌ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯು (ಜೆಎಸ್‌ಎಸ್‌ ಎಎಚ್‌ಇಆರ್‌) ಮೈಸೂರಿನ ವರುಣಾದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ‘ಗ್ಲೋಬಲ್‌ ಕ್ಯಾಂಪಸ್‌’ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಅ.11 ರಂದು ಸಂಜೆ 4ಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಎಸ್‌ಎಸ್‌ ಎಎಚ್‌ಇಆರ್‌ ಪ್ರೊ ಚಾನ್ಸಲರ್‌ ಡಾ.ಬಿ.ಸುರೇಶ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೋವಿಂದ್‌ ಅವರು ಸುತ್ತೂರು ಮಠದ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 104ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳಲಿದ್ದಾರೆ ಎಂದರು.

ಇಂದು ಮೈಸೂರಿಗೆ: ರಾಷ್ಟ್ರಪತಿ ಕೋವಿಂದ್‌ ಅವರು ಎರಡು ದಿನಗಳ ಭೇಟಿಗಾಗಿ, ಗುರುವಾರ ಸಂಜೆ ಮೈಸೂರಿಗೆ ಆಗಮಿಸಲಿದ್ದಾರೆ.

ಜಯಚಾಮರಾಜ ಒಡೆಯರ್‌ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಸಂಜೆ 7.30ಕ್ಕೆ ಅರಮನೆಯಲ್ಲಿ ಆಯೋಜಿಸಿ
ರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Post Comments (+)