ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನವದೆಹಲಿಯಲ್ಲಿ ಸರ್ಕಾರದಿಂದ ಗುರುವಾರ ಅಧಿಕೃತವಾಗಿ ಆಹ್ವಾನ ನೀಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮೇಯರ್ ಶಿವಕುಮಾರ್, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಹಾಗೂ ಚಿಕ್ಕೋಡಿ ಕ್ಷೇತ್ರದ ಸಂಸದ ಅಣ್ಣಾಸಾಹೇಬ ಜೊಲ್ಲೆ ಇದ್ದರು.

ಸೆ.26ರಂದು ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಮೈಸೂರು ದಸರೆಗೆ ಚಾಲನೆ ದೊರೆಯಲಿದೆ. ನಾಡಹಬ್ಬದ ಉದ್ಘಾಟನೆಗೆ ದೇಶದ ಪ್ರಥಮ ಪ್ರಜೆ ಆಗಮಿಸುತ್ತಿರುವುದು ಇದೇ ಮೊದಲನೇ ಬಾರಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.