ಶುಕ್ರವಾರ, ಅಕ್ಟೋಬರ್ 18, 2019
27 °C

ಮೈಸೂರು: ಜೆಎಸ್ಎಸ್ ಗ್ಲೋಬಲ್ ಕ್ಯಾಂಪಸ್‌ಗೆ ರಾಷ್ಟ್ರಪತಿಯಿಂದ ಶಿಲಾನ್ಯಾಸ

Published:
Updated:
Prajavani

ಮೈಸೂರು: ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ವತಿಯಿಂದ ಮೈಸೂರಿನ ವರುಣಾದಲ್ಲಿ 101 ಎಕರೆ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಗ್ಲೋಬಲ್ ಕ್ಯಾಂಪಸ್‌ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು.

ರಾಜ್ಯಪಾಲ ವಜೂಭಾಯಿ ವಾಲಾ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಪಾಲ್ಗೊಂಡಿದ್ದರು.

ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 104ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಭಾಗವಹಿಸಿದರು.

Post Comments (+)