ಮಂಗಳವಾರ, ಅಕ್ಟೋಬರ್ 27, 2020
23 °C
ಮೈಸೂರು, ಬೆಂಗಳೂರಲ್ಲಿ ಸೋಂಕು–ಸಾವಿನ ಪ್ರಮಾಣ ಹೆಚ್ಚಳ

ಸರಳ ದಸರೆಗೆ ಪ್ರಧಾನಿ ಮೋದಿ ಸೂಚನೆ: ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಮೈಸೂರಿನಲ್ಲಿ ಕೊರೊನಾ ಸೋಂಕು ಹಾಗೂ ಸಾವಿನ ಪ್ರಮಾಣ ಅಧಿಕವಾಗಿರುವುದರಿಂದ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡ ಇದಕ್ಕೆ ಬದ್ಧವಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಬುಧವಾರ ಇಲ್ಲಿ ತಿಳಿಸಿದರು.

ದೇಶದ 17 ರಾಜ್ಯಗಳ 60 ಜಿಲ್ಲೆಗಳಲ್ಲಿ ಕೋವಿಡ್‌ ಆರ್ಭಟ ಜೋರಾಗಿದೆ. ಅದರಲ್ಲಿ ರಾಜ್ಯದ ಬೆಂಗಳೂರು, ಮೈಸೂರು ಕೂಡ ಸೇರಿವೆ. ಈ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಕೂಡ ಸಲಹೆ ನೀಡಿದ್ದಾರೆ ಎಂದರು.

‘ದಸರೆ ಕಾರ್ಯಕ್ರಮಗಳಲ್ಲಿ ಬಹಳಷ್ಟು ಜನ ಪಾಲ್ಗೊಳ್ಳುವ ಸಾಧ್ಯತೆ ಇದೆ. ಇಂಥ ಸಂದರ್ಭದಲ್ಲಿ ಏನು ಮಾಡಬೇಕು, ಜನರ ಸುರಕ್ಷತೆಗೆ ಯಾವ ರೀತಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಮುಖ್ಯಮಂತ್ರಿಗೆ ಸಲಹೆ ನೀಡಿದ್ದಾರೆ’ ಎಂದು ವಿವರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು