ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗ ದಿನ: ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ- ಪ್ರತಾಪ್ ಸಿಂಹ

Last Updated 8 ಜೂನ್ 2022, 13:21 IST
ಅಕ್ಷರ ಗಾತ್ರ

ಮೈಸೂರು: ‘ನಗರದಲ್ಲಿ ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಅವರ ಕಾರ್ಯಾಲಯದ ಸೂಚನೆಯಂತೆ ಒಂದೇ ಜಾಗದಲ್ಲಿ ಅಧಿಕೃತವಾಗಿ ಕಾರ್ಯಕ್ರಮ ನಡೆಸಲಾಗುವುದು’ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಜೂನ್ 21ರಂದು ಬೆಳಿಗ್ಗೆ 6:30ಕ್ಕೆ ಅಂಬಾವಿಲಾಸ ಅರಮನೆಗೆ ಪ್ರಧಾನಿ ಆಗಮಿಸಲಿದ್ದಾರೆ. 10ಸಾವಿರದಿಂದ 15ಸಾವಿರ ಮಂದಿಗೆ ಅಲ್ಲಿ ಅವಕಾಶವಿರಲಿದೆ. ವೇದಿಕೆಯಲ್ಲಿ ಪ್ರಧಾನಿ ಜೊತೆ ಮುಖ್ಯಮಂತ್ರಿ, ರಾಜ್ಯಪಾಲರು, ಕೇಂದ್ರ ಆಯುಷ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರವೇ ಅವಕಾಶ ಇರಲಿದೆ’ ಎಂದು ಹೇಳಿದರು.

‘ಯೋಗಪಟುಗಳು ಬೆಳಿಗ್ಗೆ 5.30ರ ಒಳಗೆ ಅರಮನೆಗೆ ಆಗಮಿಸಬೇಕು. ಬೆಳಿಗ್ಗೆ 6.30ರಿಂದ 7ರವರಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. 7ರಿಂದ 7.45ರವರಗೆ ಪ್ರಧಾನಿ ಮೋದಿ ಅವರೊಂದಿಗೆ ಯೋಗಾಸನಗಳ ಪ್ರದರ್ಶನ ಇರಲಿದೆ. ಇದಕ್ಕಾಗಿ ಸಿದ್ಧತೆ ನಡೆಸಲಾಗುತ್ತಿದೆ’ ಎಂದರು.

‘ಜೂನ್‌ 20ರಂದೇ ಪ್ರಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಲಿದ್ದಾರೆ. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದಕ್ಕೆ ಯೋಜಿಸಲಾಗಿದೆ. ಲಕ್ಷ ಫಲಾನುಭವಿಗಳು ಭಾಗಿಯಾಗಲಿದ್ದಾರೆ. ಚಾಮುಂಡಿ ಬೆಟ್ಟ ಹಾಗೂ ಸುತ್ತೂರು ಮಠಕ್ಕೆ ಕರೆತರುವ ಯತ್ನವನ್ನೂ ಮಾಡುತ್ತಿದ್ದೇವೆ. ಜೂನ್‌ 20ರ ಕಾರ್ಯಕ್ರಮ ಇನ್ನೂ ಅಧಿಕೃತವಾಗಿಲ್ಲ. ಯೋಗಪಟುಗಳ ನೋಂದಣಿ ಬಗ್ಗೆಯೂ ನಿರ್ಧಾರವಾಗಿಲ್ಲ. ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT