ಶುಕ್ರವಾರ, ಫೆಬ್ರವರಿ 26, 2021
32 °C

ಮೈಸೂರು: ಸಂಗೀತ ವಿವಿ ಕುಲಪತಿಯಾಗಿ ನಾಗೇಶ್‌ ವಿ.ಬೆಟ್ಟಕೋಟೆ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ನಾಗೇಶ್‌ ವಿ.ಬೆಟ್ಟಕೋಟೆ ಅವರನ್ನು ನೇಮಕ ಮಾಡಿ ರಾಜ್ಯಪಾಲ ವಜುಭಾಯಿ ವಾಲಾ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಸಂಗೀತ ವಿವಿ ಕುಲಸಚಿವರಾಗಿರುವ ಬೆಟ್ಟಕೋಟೆ ಅವರು 2019ರ ಜನವರಿಯಿಂದ ಪ್ರಭಾರ ಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರನ್ನೇ ಪೂರ್ಣಾವಧಿ ಕುಲಪತಿಯಾಗಿ ನೇಮಿಸಲಾಗಿದೆ.

ಸಂಗೀತ ವಿವಿ ಕುಲಪತಿ ಸ್ಥಾನ ಎರಡೂವರೆ ವರ್ಷಗಳಿಂದ ಖಾಲಿ ಇತ್ತು. ಡಾ.ಸರ್ವಮಂಗಳಾ ಶಂಕರ್‌ ಅವರು 2018ರ ಮೇ ತಿಂಗಳಲ್ಲಿ ನಿವೃತ್ತಿಯಾದ ಬಳಿಕ ಈ ಸ್ಥಾನ ತೆರವಾಗಿತ್ತು. ಆ ಬಳಿಕ ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಆರ್‌.ರಾಜೇಶ್‌ ಅವರು ಹಂಗಾಮಿ ಕುಲಪತಿಯಾಗಿ 9 ತಿಂಗಳು ಕಾರ್ಯನಿರ್ವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು