ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ʼಕೃಷಿ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿʼ ಘೋಷಣೆಯಡಿ 26ರಂದು ರಾಜಭವನ ಚಲೋ ರ‍್ಯಾಲಿ

Last Updated 19 ಜೂನ್ 2021, 8:35 IST
ಅಕ್ಷರ ಗಾತ್ರ

ಮೈಸೂರು: ಸಂಯುಕ್ತ ಕರ್ನಾಟಕ ಕಿಸಾನ್‌ ಮೋರ್ಚಾ ವತಿಯಿಂದ ಜೂನ್‌ 26 ರಂದು ‘ಕೃಷಿ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ’ ಘೋಷವಾಕ್ಯದಡಿ ರಾಜಭವನ ಚಲೋ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ.

‘ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಎಲ್ಲ ರಾಜ್ಯಗಳಲ್ಲೂ ರಾಜ್ಯಪಾಲರ ಕಚೇರಿ ಮುಂದೆ ಧರಣಿ ನಡೆಸಿ, ರಾಷ್ಟ್ರಪತಿಗೆ ಮನವಿ ಸಲ್ಲಿಸಲು ಅಖಿಲ ಭಾರತ ಸಂಯುಕ್ತ ಕಿಸಾನ್‌ ಮೋರ್ಚಾ ಕರೆ ನೀಡಿದೆ. ಅದರಂತೆ ರಾಜ್ಯದಲ್ಲೂ ಧರಣಿ ನಡೆಯಲಿದೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಮೌರ್ಯ ವೃತ್ತದಿಂದ ಪಾದಯಾತ್ರೆಯಲ್ಲಿ ರಾಜಭವನಕ್ಕೆ ತೆರಳಿ, ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುವುದು. ರ‍್ಯಾಲಿಯಲ್ಲಿ ಒಟ್ಟು 42 ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲ್ಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT