ಮೈಸೂರು: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿರುವ ಕ್ರಮ ಖಂಡಿಸಿ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)ದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಪುರಭವನದ ಬಳಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಜಮ್ಮು ಕಾಶ್ಮೀರದ ವಿಭಜನೆಯಂತೂ ಪ್ರಜಾಪ್ರಭುತ್ವದ ಕಗ್ಗೊಲೆ ಎನಿಸಿದೆ. ಈ ಕ್ರಮದಿಂದ ಅಲ್ಲಿನ ಜನರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸರ್ಕಾರದ ಈ ಕ್ರಮದಿಂದ ಅಲ್ಲಿನ ಜನರು ಸದಾ ಆತಂಕದಲ್ಲಿ ಕಳೆಯುವಂತಾಗಿದೆ. ಇದರಿಂದ ಅಭಿವೃದ್ಧಿಗೂ ಹಿನ್ನಡೆಯಾಗಲಿದೆ ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಏಕಪಕ್ಷೀಯವಾಗಿ ಅಸಂವಿಧಾನಿಕ ನಿರ್ಧಾರ ಕೈಗೊಂಡಿದ್ದಾರೆ. ಇದು ಕೇವಲ ಜಮ್ಮು ಮತ್ತು ಕಾಶ್ಮೀರಕ್ಕೆ ಸೀಮಿತವಾದ ವಿಷಯವಲ್ಲ. ಪ್ರಜಾಪ್ರಭುತ್ವ, ಜಾತ್ಯಾತೀತತೆ ಮತ್ತು ಸಂವಿಧಾನದ ಮೇಲೆ ಆಕ್ರಮಣ ಮಾಡಿದಂತಾಗಿದೆ ಎಂದು ಅವರು ಕಿಡಿಕಾರಿದರು.

ಮುಖಂಡರಾದ ಕೆ.ಬಸವರಾಜು, ಎಚ್.ಆರ್.ಶೇಷಾದ್ರಿ, ಚೌಡಳ್ಳಿ ಜವರಯ್ಯ ಸೇರಿದಂತೆ ಹಲವು ಮಂದಿ ಪ್ರತಿಭಟನೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.