ಮಂಗಳವಾರ, ನವೆಂಬರ್ 19, 2019
23 °C

ವಿದ್ಯಾರ್ಥಿ ವೇತನ ರದ್ದು; ಆಕ್ರೋಶ

Published:
Updated:
Prajavani

ಮೈಸೂರು: ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ರದ್ದುಗೊಳಿಸದೆ, ಯಥಾವತ್ತಾಗಿ ಮುಂದುವರೆಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಬುಧವಾರ ಪ್ರತಿಭಟಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಅನುವಾಗುವಂತೆ ಎಸ್‌ಎಸ್‌ಪಿ ಯೋಜನೆಯಡಿ ವಿದ್ಯಾರ್ಥಿ ವೇತನ ನೀಡಲಾಗುತ್ತಿತ್ತು. ಈಚೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಪಿ.ವಸಂತ್‌ಕುಮಾರ್ 2019–2020ನೇ ಸಾಲಿಗೆ ಪ್ರವೇಶಾತಿ ಪಡೆದ ಮೆಟ್ರಿಕ್ ಪೂರ್ವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದು ಅಕ್ಷಮ್ಯ ಅಪರಾಧ. ಬೀದಿ ಪಾಲು ಮಾಡುವ ಹುನ್ನಾರ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಚೋರನಹಳ್ಳಿ ಶಿವಣ್ಣ, ಪಿ.ಮರಂಕಯ್ಯ, ಕೆ.ವಿ.ದೇವೇಂದ್ರ, ಸಣ್ಣಯ್ಯ ಲಕ್ಕೂರು, ಪುಟ್ಟನಂಜಯ್ಯ, ವಿಜೇಂದ್ರ, ಸೋಮನಾಯ್ಕ, ಸಂತೋಷ್, ಶಿವರಾಜು, ಭಾಗ್ಯಮ್ಮ, ಅಣ್ಣಯ್ಯ, ನಂಜರಾಜು, ಶಿವಮೂರ್ತಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರತಿಕ್ರಿಯಿಸಿ (+)