ಶುಕ್ರವಾರ, ನವೆಂಬರ್ 22, 2019
25 °C

ವೇತನಕ್ಕೆ ಆಗ್ರಹಿಸಿ ಹೊರಗುತ್ತಿಗೆ ಕಾರ್ಮಿಕರ ಪ್ರತಿಭಟನೆ

Published:
Updated:
Prajavani

ಮೈಸೂರು: ಸಕಾಲಕ್ಕೆ ವೇತನ ಪಾವತಿಸುತ್ತಿಲ್ಲ. ಕೂಡಲೇ ವೇತನ ನೀಡಬೇಕು ಎಂದು ಆಗ್ರಹಿಸಿ ಚಲುವಾಂಬ ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿ ಗುರುವಾರ ಪ್ರತಿಭಟನೆ ನಡೆಸಿದರು.

ಸರ್ಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನ ಹೊರಗುತ್ತಿಗೆ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಸೇರಿದ ಪ್ರತಿಭಟನಾನಿರತರು ಘೋಷಣೆಗಳನ್ನು ಕೂಗಿದರು.

ಮೈಸೂರು ವೈದ್ಯಕೀಯ ಕಾಲೇಜು ವ್ಯಾಪ್ತಿಯ ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ನಾನ್ ಕ್ಲಿನಿಕಲ್, ಭದ್ರತೆ ಸೇರಿದಂತೆ ಹಲವು ವಿಭಾಗಗಳಲ್ಲಿ 150ಕ್ಕೂ ಹೆಚ್ಚು ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಇವರಿಗೆ ಸಕಾಲದಲ್ಲಿ ವೇತನ ಪಾವತಿಯಾಗುತ್ತಿಲ್ಲ ಎಂದು ಕಿಡಿಕಾರಿದರು.

ನಂತರ ಮನವಿ ಪತ್ರವನ್ನು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಪ್ರಮೀಳಾ ಅವರಿಗೆ ಸಲ್ಲಿಸಲಾಯಿತು. ಕಾರ್ಮಿಕರ ಸಂಘದ ಕಾರ್ಯದರ್ಶಿ ವೆಂಕಟಲಕ್ಷ್ಮೀ, ಯಶೋಧಮ್ಮ, ಸಂಪತ್ ಕುಮಾರ್, ಭಾಗ್ಯಾ, ಮಹದೇವಮ್ಮ, ಹೊರಗುತ್ತಿಗೆ ಕಾರ್ಮಿಕರ ಒಕ್ಕೂಟದ ಅಧ್ಯಕ್ಷರಾದ ಎಂ.ಬಿ.ನಾಗಣ್ಣ ಪ್ರತಿಭಟನೆಯಲ್ಲಿದ್ದರು.

 

ಪ್ರತಿಕ್ರಿಯಿಸಿ (+)