ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ನಿವಾಸದ ಮೇಲಿನ ದಾಳಿಗೆ ಖಂಡನೆ

Last Updated 22 ಜುಲೈ 2020, 9:02 IST
ಅಕ್ಷರ ಗಾತ್ರ

ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ನಿವಾಸದ ಮೇಲೆ ಈಚೆಗೆ ನಡೆದ ದಾಳಿಯನ್ನು ಖಂಡಿಸಿ ನಗರದಲ್ಲಿ ಪ್ರತಿಭಟನೆಗಳು ಮುಂದುವರಿದಿವೆ.

ಸಮತಾ ಸೈನಿಕ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಸೇರಿ, ಘಟನೆಯನ್ನು ಖಂಡಿಸಿದರು.

ಈ ಪ್ರಕರಣದ ಹಿಂದೆ ಇರುವ ಶಕ್ತಿಗಳನ್ನು ಗುರುತಿಸಿ, ಬಂಧಿಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ನಿರುದ್ಯೋಗಿಗಳಿಗೆ ₹ 5 ಸಾವಿರ ಮಾಸಿಕ ಭತ್ಯೆ ನೀಡಬೇಕು, ಆಶಾ ಕಾರ್ಯಕರ್ತೆಯರಿಗೆ ₹ 12 ಸಾವಿರ ಮಾಸಿಕ ಗೌರವಧನ ನಿಗದಿಪಡಿಸಬೇಕು, ಆನ್‌ಲೈನ್‌ ಶಿಕ್ಷಣ ಪದ್ದತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ವೆಂಕಟೇಶ್, ಎಸ್‌.ವೆಂಕಟರಮಣ, ಎಸ್.ಅಮೃತಾ, ಆರ್.ಕುಮಾರಸ್ವಾಮಿ, ಮುತ್ತುರಾಜ್ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT