ಮೈಸೂರು: ಬೆಲೆ ಏರಿಕೆ ವಿರುದ್ಧ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಬಿ.ರವಿ, ಅಡುಗೆ ಅನಿಲದ ಬೆಲೆ ಏರಿಕೆಯು ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೊರೆ ಎನಿಸಿದೆ. ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಹರಿಹಾಯ್ದರು.

ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಅಡುಗೆ ಅನಿಲ, ಅಡುಗೆ ಎಣ್ಣೆ, ಬೇಳೆಕಾಳುಗಳ ಬೆಲೆ ಇಳಿಕೆಗೆ ಒತ್ತಾಯಿಸಿ ಪ್ರಧಾನಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿದರು.

ಹೋರಾಟಗಾರರಾದ ಚಂದ್ರಶೇಖರ, ಸಂಧ್ಯಾ, ಸೀಮಾ, ಹರೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.