ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Last Updated 23 ಜುಲೈ 2020, 9:30 IST
ಅಕ್ಷರ ಗಾತ್ರ

ಮೈಸೂರು: ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲ ಕುಟುಂಬಗಳಿಗೂ ಕೋವಿಡ್ ಸಂಕಷ್ಟ ಮುಗಿಯುವವರೆಗೆ ಮಾಸಿಕ ₹ 7,500 ಹಣ ನೀಡಬೇಕು ಎಂದು ಆಗ್ರಹಿಸಿ ರೈತರು ಹಾಗೂ ಕಾರ್ಮಿಕರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್‌ನ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೇರಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ದೇಶದ ಒಟ್ಟು ಆಂತರಿಕ ಉತ್ಪಾದನೆಯ ‌ಶೇ 3ರಷ್ಟು ಅಂಶವನ್ನು ಕೋವಿಡ್ ನಿಯಂತ್ರಣಕ್ಕೆ ವೆಚ್ಚ ಮಾಡಬೇಕು, ನಿರುದ್ಯೋಗಿಗಳಿಗೆ ಮಾಸಿಕ ₹ 10 ಸಾವಿರ ಹಣ ನೀಡಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕಣ್ಣೇಗೌಡ, ಪ್ರಧಾನ ಕಾರ್ಯದರ್ಶಿ ಜಗದೀಶ್ ಸೂರ್ಯ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT