ಗುರುವಾರ , ಆಗಸ್ಟ್ 6, 2020
24 °C

ಪೌರಕಾರ್ಮಿಕರ ಕಾಯಂಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕು, ಪೌರ ಕಾರ್ಮಿಕರಿಲ್ಲದ ಗ್ರಾಮ ಪಂಚಾಯಿತಿಗಳಲ್ಲಿ ಕೂಡಲೇ ಅವರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಇಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ರಾಜ್ಯದ ಸುಮಾರು 6,220 ಗ್ರಾಮ ಪಂಚಾಯಿತಿಗಳಲ್ಲಿ ದುಡಿಯುತ್ತಿರುವ ಪೌರ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ. ಸುಮಾರು 6 ಸಾವಿರಕ್ಕೂ ಅಧಿಕ ಮಂದಿ ಪೌರಕಾರ್ಮಿಕರು ಕೊಟ್ಟಷ್ಟು ಕೂಲಿ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ಅಳಲು ತೋಡಿಕೊಂಡರು.

ಗ್ರಾಮ ಪಂಚಾಯಿತಿ ಸ್ವಚ್ಛತಾ ಕಾರ್ಯಕ್ಕೆ ಆಧುನಿಕ ಯಂತ್ರೋಪಕರಣಗಳನ್ನು ಬಳಕೆ ಮಾಡಬೇಕು, ಕರ್ತವ್ಯದಲ್ಲಿ ಮೃತಪಟ್ಟ ಪೌರಕಾರ್ಮಿಕರ ಕುಟುಂಬದವರಿಗೆ ₹ 10 ಲಕ್ಷ ಪರಿಹಾರ ಹಾಗೂ ಅವರ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡಬೇಕು, ಪೌರಕಾರ್ಮಿಕರಿಗೆ ವಾಸ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಅವರು ಆಗ್ರಹಿಸಿದರು.

ಜಿಲ್ಲಾ ಸಮಿತಿ ಪದಾಧಿಕಾರಿಗಳಾದ ಪುಟ್ಟಲಕ್ಷ್ಮಮ್ಮ, ಕಾರ್ಯ ಬಸವಣ್ಣ, ದೊಡ್ಡಸಿದ್ದು ಹಾದನೂರು, ಸೋಮಣ್ಣ ಬನ್ನಹಳ್ಳಿ ಹಾಗೂ ಇತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.