ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ರೈತ ಸಂಘ ಆಕ್ರೋಶ: ಕರಡು ಪ್ರತಿಗೆ ಬೆಂಕಿ

Last Updated 13 ಜೂನ್ 2020, 11:07 IST
ಅಕ್ಷರ ಗಾತ್ರ

ಮೈಸೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಶನಿವಾರ ತಿದ್ದುಪಡಿಯ ಕರಡು ಪ‍್ರತಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯದ ಮುಂದೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಅವರು, ‘ಜೂನ್ 15ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು. ಜೂನ್ 27ರಿಂದ 30ರವರೆಗೆ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ರಾಜ್ಯದ ಸಾವಿರ ಪಂಚಾಯಿತಿ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ’ ಎಂದು ತಿಳಿಸಿದರು.

ಇದಕ್ಕೂ ಸರ್ಕಾರ ಸ್ಪಂದಿಸದಿದ್ದರೆ ತಿದ್ದುಪಡಿಯಿಂದ ಆಗಲಿರುವ ಅನಾನುಕೂಲಗಳಕುರಿತ ಕರಪತ್ರಗಳನ್ನು 10 ಲಕ್ಷ ಕುಟುಂಬಗಳಿಗೆ ಹಂಚಲಾಗುವುದು. ನಂತರ, ಲಕ್ಷಾಂತರ ಸಂಖ್ಯೆಯಲ್ಲಿ ರೈತರು ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT