ಭಾನುವಾರ, ಅಕ್ಟೋಬರ್ 25, 2020
28 °C

ಅಧಿಕಾರಿಗಳ ನಿರ್ಲಕ್ಷ್ಯ: ನಿವಾಸಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಸ್ಮಶಾನ ಒತ್ತುವರಿ ತೆರವುಗೊಳಿಸಬೇಕು ಮತ್ತು ಮನೆಗಳಿಗೆ ಹಕ್ಕುಪತ್ರ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಶ್ರೀರಾಂಪುರ ಗ್ರಾಮದ ಪರಿಶಿಷ್ಟ ಜಾತಿ ಕುಟುಂಬಗಳ ಸದಸ್ಯರು ಸಮತಾ ಸೈನಿಕ ದಳದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

ಗ್ರಾಮದ 4 ಎಕರೆಯಷ್ಟು ಸ್ಮಶಾನ ಜಾಗದಲ್ಲಿ 1 ಎಕರೆ 13 ಗುಂಟೆ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ತೆರವು ಮಾಡಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಕೆ.ಆರ್‌.ನಗರ ತಾಲ್ಲೂಕಿನ ಕೆಲವು ಭ್ರಷ್ಟ ಅಧಿಕಾರಿಗಳು ಭೂಗಳ್ಳರಿಗೆ ಒತ್ತುವರಿ ಮಾಡಲು ನೆರವಾಗಿದ್ದಾರೆ. ನಮ್ಮ ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

ಎರಡು ವರ್ಷಗಳ ಹಿಂದೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಗ್ರಾಮದ ಕಡುಬಡವವರು ಅಕ್ರಮ–ಸಕ್ರಮ ಅರ್ಜಿ ನೀಡಿದ್ದರು. ಆದರೆ ಇದುವರೆಗೂ ಯಾವುದೇ ಅಧಿಕಾರಿಗಳು ಬಂದು ಸಕ್ರಮ ಮಾಡಿ ಹಕ್ಕುಪತ್ರ ನೀಡಿಲ್ಲ ಎಂದು ದೂರಿದರು.

ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ವಿ.ಗಣೇಶ್, ಉಪಾಧ್ಯಕ್ಷ ರಾಜು, ಕಾರ್ಯಾಧ್ಯಕ್ಷ ಸೆಂದಿಲ್‌ ಕುಮಾರ್, ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಕುಮಾರ್‌ ಹಾಗೂ ಪದಾಧಿಕಾರಿಗಳು, ಗ್ರಾಮದ ನಿವಾಸಿಗಳು ಪಾಲ್ಗೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು