ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಇಎಸ್ ನಿಷೇಧಿಸಲು ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ

Last Updated 20 ಡಿಸೆಂಬರ್ 2021, 10:23 IST
ಅಕ್ಷರ ಗಾತ್ರ

ಮೈಸೂರು: ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದವರನ್ನು ಬಂಧಿಸಬೇಕು ಹಾಗೂ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಹಾಗೂ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಪ್ರತ್ಯೇಕವಾಗಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಮೆಯನ್ನು ಭಗ್ನಗೊಳಿಸಿದವರನ್ನು ಗಡಿಪಾರು ಮಾಡದಿದ್ದರೆ, ಎಂಇಎಸ್ ಸಂಘಟನೆಯನ್ನು ನಿಷೇಧಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧವೂ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಸನ್ನಕುಮಾರ್ ತಿಳಿಸಿದರು. ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.

ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಎಂಇಎಸ್‌ ಪ್ರತಿಕೃತಿಯೊಂದಿಗೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡಿಗರ ತಾಳ್ಮೆಯನ್ನು ಎಂಇಎಸ್ ಪರೀಕ್ಷೆ ಮಾಡುತ್ತಿದೆ. ಸರ್ಕಾರ ಮೌನ ವಹಿಸದೇ ಕೂಡಲೇ ಎಂಇಎಸ್‌ ಸಂಘಟನೆಯನ್ನು ನಿಷೇಧಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಆಗ್ರಹಿಸಿದರು.

ಇಲ್ಲಿನ ಮಹಾತ್ಮ ಗಾಂಧಿ ಚೌಕದಲ್ಲಿ ಸೇರಿದ ಕೆಲವು ಸಂಘಟನೆಗಳ ಕಾರ್ಯಕರ್ತರು ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.

ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಪಡುವಾರಹಳ್ಳಿ ಎಂ ರಾಮಕೃಷ್ಣ, ನಿರ್ದೇಶಕರಾದ ರವಿಕುಮಾರ್ ಜೆ.ಯೋಗೇಶ್, ಎಚ್.ಹರೀಶ್ ಕುಮಾರ್, ಎಸ್.ಆರ್.ರವಿಕುಮಾರ್, ಕುಮಾರ್ ಗೌಡ, ಪ್ರಶಾಂತ್ (ಶಾಂತಿ), ಗಂಗಣ್ಣ, ಸುರೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT