ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಾರ್ದನ ರೆಡ್ಡಿ ವಿರುದ್ಧ ಪ್ರತಿಭಟನೆ

Last Updated 31 ಅಕ್ಟೋಬರ್ 2018, 7:35 IST
ಅಕ್ಷರ ಗಾತ್ರ

ಮೈಸೂರು: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಸಾವಿಗೆ ನನ್ನ ಶಾಪವೇ ಕಾರಣ ಎಂದು ಬಿಜೆಪಿ ಮುಖಂಡ ಜನಾರ್ದನ ರೆಡ್ಡಿ ಹೇಳಿರುವುದು ಸರಿಯಲ್ಲ ಎಂದು ರಾಕೇಶ್‌ ಸಿದ್ದರಾಮಯ್ಯ ಅಭಿಮಾನಿ ಬಳಗದ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ರೆಡ್ಡಿ ಸೋದರರು ಕರ್ನಾಟಕದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ. ಅವರ ವಿರುದ್ಧ ಸಾಕಷ್ಟು ಪ್ರಕರಣಗಳು ನ್ಯಾಯಾಲಯದಲ್ಲಿವೆ. ಇವರು ಈ ರೀತಿ ನೀಡಿರುವ ಹೇಳಿಕೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೆಡ್ಡಿ ಅವರ ಭಾವಚಿತ್ರಕ್ಕೆ ಬೆಂಕಿ ಹಾಕಿದ ಕಾರ್ಯಕರ್ತರು ಚಪ್ಪಲಿಯಲ್ಲಿ ಹೊಡೆಯುವ ಮೂಲಕ ಕಿಡಿಕಾರಿದರು. ಕೂಡಲೇ ಅವರು ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಾಲಿಕೆ ಸದಸ್ಯ ಪಿ.ಲೋಕೇಶ್ ಮುಖಂಡರಾದ ನಾಗೇಶ ನಾಯ್ಕ, ರಘು, ವಿಶ್ವ, ನಯಾಜ್, ಅರ್ಜುನ್ ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT