ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ ತಡೆಗಟ್ಟಲು ಒತ್ತಾಯಿಸಿ ಪ್ರತಿಭಟನೆ

Last Updated 7 ಮಾರ್ಚ್ 2021, 3:51 IST
ಅಕ್ಷರ ಗಾತ್ರ

ಮೈಸೂರು: ಬೆಲೆ ಏರಿಕೆಯನ್ನು ತಡೆಗಟ್ಟಬೇಕು ಎನ್ನುವುದೂ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) (ಎಸ್‌ಯುಸಿಐ) ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಅಡುಗೆ ಎಣ್ಣೆ, ಬೇಳೆಕಾಳುಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಅಡುಗೆ ಅನಿಲ ಸಬ್ಸಿಡಿ ರದ್ಧತಿಯನ್ನು ವಾಪಸ್ ಪಡೆಯಬೇಕು, ಎಲ್ಲ ಬಡವರಿಗೂ ಪಡಿತರ ಚೀಟಿ ಒದಗಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.

ರೈಲು ಓಡಾಟವನ್ನು ಸಹಜ ಸ್ಥಿತಿಗೆ ತರಬೇಕು, ಅಂಗವಿಕಲರಿಗೆ, ವೃದ್ಧರಿಗೆ, ವಿಧವೆಯರಿಗೆ ಮಾಸಿಕ ಪಿಂಚಣಿಯನ್ನು ವಿಳಂಬ ಮಾಡದೇ ವಿತರಿಸಬೇಕು ಎಂದು ಆಗ್ರಹಿಸಿದರು.

ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಬಿ.ರವಿ, ಜಿಲ್ಲಾ ಸೆಕ್ರೆಟೇರಿಯಟ್ ಸದಸ್ಯರಾದ ಎಂ.ಉಮಾದೇವಿ, ಚಂದ್ರಶೇಖರ್ ಮೇಟಿ, ಜಿಲ್ಲಾ ಸಮಿತಿ ಸದಸ್ಯರಾದ ವಿ.ಯಶೋಧರ್, ಸಂಧ್ಯಾ, ಸೀಮಾ, ಹರೀಶ್, ಸುನಿಲ್, ಸುಭಾಷ್, ಪುಟ್ಟರಾಜು, ಆಸಿಯಾ, ಕಲಾವತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT