ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.16ರಿಂದ ಬೆಂಗಳೂರಿನಲ್ಲಿ ಪ್ರತಿಭಟನೆ

ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟಗಾರರು ಭಾಗವಹಿಸುವಂತೆ ಮನವಿ
Last Updated 16 ಡಿಸೆಂಬರ್ 2020, 1:55 IST
ಅಕ್ಷರ ಗಾತ್ರ

ಮೈಸೂರು: ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಡಿ.16ರಿಂದ ಬೆಂಗಳೂರಿನ ಮೌರ್ಯ ವೃತ್ತದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಇಲ್ಲಿ ಮಂಗಳವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ವತಿಯಿಂದ ನಡೆಯಲಿರುವ ಈ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಲಾಗುವುದು. ಸಾರ್ವಜನಿಕ ವಲಯದ ಕಂಪನಿಗಳನ್ನು ಮಾರಾಟ ಮಾಡಿದ ನಂತರ ರೈತರನ್ನು ಬಂಡವಾಳಶಾಹಿಗಳಿಗೆ ಮಾರಾಟ ಮಾಡುತ್ತಿರುವುದರಿಂದ ಹೋರಾಟ ಅನಿವಾರ್ಯವಾಗಿದೆ ಎಂದರು.

ದೆಹಲಿಯಲ್ಲಿ ಹಲವು ದಿನಗಳಿಂದ ಕೊರೆಯುವ ಚಳಿಯಲ್ಲಿ ರೈತರು ಹೋರಾಟ ನಡೆಸುತ್ತಿದ್ದರೂ, 14 ರೈತರು ಹೋರಾಟಕ್ಕಾಗಿ ಪ್ರಾಣ ತೆತ್ತಿದ್ದರೂ, ಕೇಂದ್ರ ಸರ್ಕಾರ ಸಮಸ್ಯೆ ಬಗೆಹರಿಸದೆ, ವಿಳಂಬ ಮಾಡುವ ಮೂಲಕ ಚಳವಳಿ ದಿಕ್ಕು ತಪ್ಪಿಸಲು ಯತ್ನಿಸುತ್ತಿದೆ ಎಂದು ಕಿಡಿಕಾರಿದರು.

ಈ ಚಳವಳಿಯನ್ನು ಬೆಂಬಲಿಸಲು ಕರ್ನಾಟಕದ ರೈತರ ಪರವಾಗಿ ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟದಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಹಿತಕ್ಕಾಗಿ ಕಾಯ್ದೆ ಜಾರಿಗೆ ತರಲಾಗಿದೆ ಎನ್ನುತ್ತಿವೆ. ಆದರೆ, ರೈತರ ಹೋರಾಟ ತೀವ್ರವಾಗುತ್ತಿದ್ದಂತೆ ತಿದ್ದುಪಡಿ ಮಾಡಲು ಮುಂದಾಗುತ್ತಾರೆ. ಇದು ಕಾಯ್ದೆಯಲ್ಲಿ ಲೋಪ ಇದೆ ಎಂಬುದಕ್ಕೆ ಉದಾಹರಣೆ ಎಂದು ಹೇಳಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ, ಮುಖಂಡರಾದ ರಾಜಣ್ಣ, ಅಂಕಪ್ಪ, ಪರಶಿವಮೂರ್ತಿ, ಮಹಿಳಾ ಸಂಚಾಲಕಿ ರಾಣಿ, ಬರಡನಪುರ ನಾಗರಾಜ್, ಹಾಡ್ಯರವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT