ಗುರುವಾರ , ಜುಲೈ 7, 2022
20 °C

ಮೈಸೂರು: ​ರಂಗಾಯಣದ ಮುಂದೆ ನಿಲ್ಲದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ವಜಾಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ ಮುಂದುವರಿದಿದೆ.

ರಂಗಾಯಣ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟಗಾರರು ಕುಕ್ಕರಹಳ್ಳಿ ಕೆರೆ ಮುಂದೆ ಸಭೆ ನಡೆಸಿ, ರಂಗಾಯಣದತ್ತ ಮೆರವಣಿಗೆ ಹೊರಡಲು ಮುಂದಾದರು. ಬ್ಯಾರಿಕೇಡ್ ಹಾಕಿದ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರಿಗೂ, ಪ್ರತಿಭಟನಕಾರರಿಗೂ ಜಟಾಪಟಿ ನಡೆಯಿತು. ಮಫ್ತಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಂದಿಸಿದರು ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕಲಾಮಂದಿರಕ್ಕೆ ಮೌನವಾಗಿ ಮೆರವಣಿಗೆ ಹೊರಡಲು ಅನುಮತಿ ನೀಡಬೇಕೆಂದು ಕೋರಿದರು. ಆದರೆ ಪೊಲೀಸರು ಅವಕಾಶ ಕೊಡಲಿಲ್ಲ. ಇದರಿಂದ ಕೋಪಗೊಂಡ ಪ್ರತಿಭಟನಕಾರರು ಕ್ರಾಂತಿಗೀತೆಗಳನ್ನು ಹಾಡುತ್ತಾ ಧರಣಿ ಕುಳಿತರು.

ಎಂದಿನಂತೆ ರಂಗಾಯಣದ ಮುಂದಿನ ರಸ್ತೆಯಲ್ಲಿ ಸಂಚಾರವನ್ನು ಕೆಲಕಾಲದ ಮಟ್ಟಿಗೆ ನಿರ್ಬಂಧಿಸಲಾಗಿತ್ತು.

ರಸ್ತೆಯ ಮತ್ತೊಂದು ತುದಿಯಲ್ಲಿ ಅಡ್ಡಂಡ ಕಾರ್ಯಪ್ಪ ಅವರ ಬೆಂಬಲಿಗರು ಮೌನ ಪ್ರತಿಭಟನೆ ಮುಂದುವರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು