ಶುಕ್ರವಾರ, ಜನವರಿ 22, 2021
28 °C

ರೈತರ ಬಂಧನ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: 'ದೆಹಲಿ ಚಲೊ'ದಲ್ಲಿ ಭಾಗಿಯಾಗಿದ್ದ ರೈತ ಮುಖಂಡರ ಬಂಧನ ಖಂಡಿಸಿ ನಗರದಲ್ಲಿ ರೈತರು ಶುಕ್ರವಾರ  ಗನ್ ಹೌಸ್ ಸಮೀಪ ಮೈಸೂರು- ನಂಜನಗೂಡು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಸೇರಿದ ಪ್ರತಿಭಟನಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಂಧಿಸಿರುವ ರೈತರನ್ನು ಕೂಡಲೇ ಬಿಡುಗಡೆ ಮಾಡಬೇಕು, ರೈತರ ಮೇಲೆ ದೌರ್ಜನ್ಯ ಎಸಗುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಇದ್ದರು.


ಗನ್ ಹೌಸ್ ನಂಜನಗೂಡು ರಸ್ತೆ ಬಳಿ ರಸ್ತೆ ತಡೆದು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಪ್ರತಿಭಟನೆ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು