ಗುರುವಾರ , ಅಕ್ಟೋಬರ್ 1, 2020
27 °C

ಮೈಸೂರು | 'ನಮ್ಮೂರ ಭೂಮಿ ನಮಗಿರಲಿ': ಪ್ರತಿಭಟನೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ರೈತರು ತಮ್ಮ ಭೂಮಿಯಲ್ಲಿ 'ನಮ್ಮೂರ ಭೂಮಿ ನಮಗಿರಲಿ ಅನ್ಯರಿಗಲ್ಲ' ಎಂಬ ಘೋಷಣೆಯುಳ್ಳ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುವ ಬ್ಯಾನರ್ ನ್ನು ನೆಡುವ ಚಳವಳಿಯನ್ನು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಆರಂಭಿಸಿದರು.

ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಇಲ್ಲಿನ ಎಚ್.ಡಿ.ದೇವೇಗೌಡ ವೃತ್ತದಲ್ಲಿ ಸೋಮವಾರ ಈ ಚಳವಳಿಗೆ ಚಾಲನೆ ನೀಡಿದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಮೈಸೂರು ಚಾಮರಾಜನಗರ ಜಿಲ್ಲಾ ಸುಸ್ಥಿರ  ಸಾವಯವ ಕೃಷಿಕರ ಒಕ್ಕೂಟದ ನೇತೃತ್ವದಲ್ಲಿ ಸೇರಿದ ರೈತರು ಸರ್ಕಾರ ಈಚೆಗೆ ಭೂಸುಧಾರಣಾ ಕಾಯ್ದೆಗೆ ತಂದ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದರು.

ಈ ತಿದ್ದುಪಡಿ ತಮಗೆ ಒಪ್ಪಿಗೆ ಇಲ್ಲ ಎಂದು ರೈತರು ಇದೇ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದರು.
ನಮ್ಮೂರ ಭೂಮಿ ನಮಗಿರಲಿ ಎಂಬ ಬ್ಯಾನರ್ ನ್ನು ಜಮೀನಿಗೆ ಕಟ್ಟಿದರು. ಇದೇ ಬಗೆಯ ಚಳವಳಿಗಳು ಏಕಕಾಲಕ್ಕೆ ಜಿಲ್ಲೆಯ 30ಕ್ಕೂ ಅಧಿಕ ಕಡೆ ಆರಂಭವಾಗಿದೆ.


ಪ್ರತಿಭಟನಾಕಾರರು ಮುಖ್ಯಮಂತ್ರಿಗೆ ಬರೆದಿರುವ ಪತ್ರ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು