ಮಂಗಳವಾರ, ಅಕ್ಟೋಬರ್ 20, 2020
25 °C

ನಂಜನಗೂಡು: ಉ.ಪ್ರ. ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಂಜನಗೂಡು: ಉತ್ತರ ಪ್ರದೇಶದ ಹಾಥರಸ್‌ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಬುಧವಾರ ನಗರದ ತಾಲ್ಲೂಕು ಕಚೇರಿ ಮುಂಭಾಗ ತಾಲ್ಲೂಕು ನಾಯಕರ ಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ತಾಲ್ಲೂಕು ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಕಾರರು ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ನಾಯಕ ಸಮಾಜದ ಮುಖಂಡ ಎಚ್.ಸಿ.ಬಸವರಾಜು ಮಾತನಾಡಿ, ‘ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಖಂಡನೀಯ. ಘಟನೆ ನಡೆದ ನಂತರ ತಪ್ಪಿತಸ್ಥರನ್ನು ಹಿಡಿದು ಶಿಕ್ಷಿಸಬೇಕಾದ ಸರ್ಕಾರ, ಸಾಕ್ಷಿಯನ್ನು ನಾಶ ಮಾಡಲು ಹೊರಟಿದೆ’ ಎಂದು ಆರೋಪಿಸಿದರು.

‘ಸಂವಿಧಾನವನ್ನು ತಿದ್ದುಪಡಿ ಮಾಡುತ್ತೇವೆಂದು ಹೇಳುವ ಮನುವಾದಿ ಸರ್ಕಾರದಲ್ಲಿ ದಲಿತ, ಹಿಂದುಳಿದವರ ರಕ್ಷಣೆ ಸಾಧ್ಯವಿಲ್ಲ. ರಾಷ್ಟ್ರಪತಿಗಳು ಉತ್ತರ ಪ್ರದೇಶ ಸರ್ಕಾರವನ್ನು ವಜಾಗೊಳಿಸಬೇಕು, ತಪ್ಪಿತಸ್ಥರಿಗೆ ಉಗ್ರ ಶಿಕ್ಷೆಯಾಗಬೇಕು’ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನಾಯಕರ ಸಂಘದ ಅಧ್ಯಕ್ಷ ಬಂಗಾರ ಸ್ವಾಮಿ, ನಾಗೇಂದ್ರ, ರಂಗಸ್ವಾಮಿ, ಗೊಣ್ಣಹಳ್ಳಿ ಕುಮಾರ್, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿದ್ಯಾಸಾಗರ್, ಬೊಕ್ಕಳ್ಳಿ ನಂಜುಂಡಸ್ವಾಮಿ, ದೇಬೂರು ವೀರಣ್ಣ, ದಲಿತ ಸಂಘರ್ಷ ಸಮಿತಿಯ ಮಲ್ಲಹಳ್ಳಿ ನಾರಾಯಣ, ಶಂಕರಪುರ ಸುರೇಶ್, ಕಾರ್ಯ ಬಸವಣ್ಣ, ಮಂಜು, ಜನ ಸಂಗ್ರಾಮ ಪರಿಷತ್ ವಿಭಾಗೀಯ ಕಾರ್ಯದರ್ಶಿ ವಿಜಯ್‌ಕುಮಾರ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು