ಬುಧವಾರ, ಜನವರಿ 27, 2021
21 °C
ಮೈಸೂರಿನ ಪುರಭವನದ ಎದುರು ಭಾರತೀಯ ಕಮ್ಯುನಿಸ್ಟ್ ಪಕ್ಷದಿಂದ ಆಕ್ರೋಶ

ರೈತರ ಹೋರಾಟ ಬೆಂಬಲಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಇಲ್ಲಿನ ಪುರಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.

ರೈತರ ಮೇಲೆ ಜಲಫಿರಂಗಿ ಮತ್ತು ಅಶ್ರುವಾಯು ಬಳಕೆ ಮಾಡುವ ಮೂಲಕ ಸರ್ಕಾರ ದೌರ್ಜನ್ಯ ಎಸಗಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಮಾತ್ರವಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದ ನಡೆ ಎಂದು ಅವರು ಟೀಕಿಸಿದರು.

ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲ ಮಾಡಿಕೊಡಲೆಂದೇ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಮೇಲ್ನೋಟಕ್ಕೆ ಮಾತ್ರವೇ ಇದು ರೈತಪರ ಎಂದು ಕಾಣಿಸುತ್ತದೆ. ಆದರೆ, ಭವಿಷ್ಯದ ದೃಷ್ಟಿಯಿಂದ ಇದು ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲಕರವಾಗಿದೆ ಎಂದು ಅವರು ಹೇಳಿದರು.

ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ. ಇದರಿಂದ ಸಣ್ಣ ಹಿಡುವಳಿದಾರರು ಭೂಮಿಯನ್ನು ಕಳೆದುಕೊಳ್ಳುವ ಸ್ಥಿತಿ ಎದುರಾಗಲಿದೆ. ಹಾಗಾಗಿ, ಈ ಎರಡೂ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸುವುದು ತಪ್ಪೇ ಎಂದು ಅವರು ಪ್ರಶ್ನಿಸಿದರು.

ಸಂಘಟನೆಯ ಕಾರ್ಯದರ್ಶಿ ಎಚ್.ಆರ್.ಶೇಷಾದ್ರಿ, ಸಹಕಾರ್ಯದರ್ಶಿ ಎಚ್.ಬಿ.ರಾಮಕೃಷ್ಣ, ಜಿಲ್ಲಾ ಮಂಡಳಿ ಸದಸ್ಯರಾದ ಸೋಮರಾಜೇಅರಸ್, ಡಿ.ಜಗನ್ನಾಥ್, ಎನ್.ಕೆ.ದೇವದಾಸ್ ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು